ಬಿಂಕದಕಟ್ಟಿಯಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ ಭಾಗ್ಯ

7

ಬಿಂಕದಕಟ್ಟಿಯಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ ಭಾಗ್ಯ

Published:
Updated:
ಬಿಂಕದಕಟ್ಟಿಯಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ ಭಾಗ್ಯ

ಗದಗ: ಇಲ್ಲಿನ ಬಿಂಕದಕಟ್ಟಿ ಸಣ್ಣ ಮೃಗಾಲಯಕ್ಕೆ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಿಂದ ತರಲಾಗಿದ್ದ ಎರಡು ಹುಲಿಗಳನ್ನು ಸೋಮವಾರದಿಂದ ಪ್ರವಾಸಿಗರ ದರ್ಶನಕ್ಕೆ ಮುಕ್ತಗೊಳಿಸಲಾಯಿತು.

ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಮೃಗಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಪ್ರವಾಸಿಗರಿಗೆ ಹೊಸ ಅತಿಥಿಗಳಾದ ಅನಸೂಯಾ ಹಾಗೂ ಲಕ್ಷ್ಮಣ್‌ ಹೆಸರಿನ ಹುಲಿಗಳನ್ನು ನೋಡುವ ಭಾಗ್ಯ ಲಭಿಸಿತು.

‘ಡಿಸೆಂಬರ್‌ ಮೊದಲ ವಾರದಲ್ಲೇ ಹುಲಿಗಳನ್ನು ಇಲ್ಲಿಗೆ ತರಲಾಗಿತ್ತು. ಆದರೆ, ಅವುಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡ ನಂತರ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿತ್ತು. ಸಂಕ್ರಾಂತಿ ದಿನದಿಂದ ಹುಲಿಗಳ ದರ್ಶನಕ್ಕೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ’ ಎಂದು ಮೃಗಾಲಯ ಆರ್‍ಎಫ್‌ಒ ಮಹಾಂತೇಶ ಪೆಟ್ಲೂರ ‘ಪ್ರಜಾವಾಣಿ’ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry