ಕಾಮಗಾರಿ ಕಳಪೆ; ಗ್ರಾಮಸ್ಥರ ಆರೋಪ

7

ಕಾಮಗಾರಿ ಕಳಪೆ; ಗ್ರಾಮಸ್ಥರ ಆರೋಪ

Published:
Updated:

ಕುಶಾಲನಗರ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಹಾರಂಗಿ ಜಲಾಶಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಾವೇರಿ ನೀರಾವರಿ ನಿಗಮ ₹ 70 ಲಕ್ಷ ವೆಚ್ಚದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಗುಮ್ಮನಕೊಲ್ಲಿಯಿಂದ ಗೋಪಾಲ್ ಸರ್ಕಲ್ ವರೆಗೆ 2 ಕಿ.ಮೀ ರಸ್ತೆ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿತ್ತು. ಆದರೆ, ರಸ್ತೆ ಡಾಂಬರೀಕರಣಗೊಂಡ ಒಂದೇ ವಾರದಲ್ಲಿ ಜಲ್ಲಿಕಲ್ಲುಗಳು ಮೇಲೆದ್ದಿವೆ. ವಾಹನಗಳ ಚಲಿಸುವಾಗ ರಸ್ತೆಯಲ್ಲಿರುವ ಜಲ್ಲಿ ಕಲ್ಲುಗಳು ಏಳುತ್ತಿವೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂದು ಗ್ರಾಮದ ಮುಖಂಡ ರಾಘವೇಂದ್ರ ದೂರಿದ್ದಾರೆ.

ನೀರಾವರಿ ಇಲಾಖಾಧಿಕಾರಿಗಳು ರಸ್ತೆಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು. ಉತ್ತಮ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry