‘ಪ್ರಧಾನಿ ಮಧ್ಯಸ್ಥಿಕೆ ಅಸಾಧ್ಯ’

6

‘ಪ್ರಧಾನಿ ಮಧ್ಯಸ್ಥಿಕೆ ಅಸಾಧ್ಯ’

Published:
Updated:

ಹುಬ್ಬಳ್ಳಿ: ‘ಮಹದಾಯಿ ವಿವಾದ ಈಗಾಗಲೇ ನ್ಯಾಯಮಂಡಳಿಯಲ್ಲಿ ಇರುವುದರಿಂದ ಪ್ರಧಾನಿ ಮೋದಿ ಅವರು ಮಧ್ಯ ಪ್ರವೇಶಿಸುವುದು ಅಸಾಧ್ಯ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್‌ ಸ್ಪಷ್ಟಪಡಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಗೋವಾ ಸಿ.ಎಂ ಮನವೊಲಿಸಿ ಸಂಧಾನ ನಡೆಸುವ ಪತ್ರ ತಂದಿದ್ದರು. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೋವಾದ ಕಾಂಗ್ರೆಸ್‌ ನಾಯಕರ ಮನವೊಲಿಸಿ ಮಹದಾಯಿ ವಿಷಯದಲ್ಲಿ ವಿರೋಧ ವ್ಯಕ್ತಪಡಿಸದಂತೆ ನೋಡಿಕೊಳ್ಳಬೇಕಿತ್ತು. ಆದರೆ ಅವರು ಈ ವಿಚಾರದಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry