ಜನಾರ್ದನರೆಡ್ಡಿಗೆ ಚುನಾವಣೆ ನೇತೃತ್ವ: ಶ್ರೀರಾಮುಲು ಮನವಿ

7

ಜನಾರ್ದನರೆಡ್ಡಿಗೆ ಚುನಾವಣೆ ನೇತೃತ್ವ: ಶ್ರೀರಾಮುಲು ಮನವಿ

Published:
Updated:

ಬಳ್ಳಾರಿ: ‘ಮುಂಬರುವ ವಿಧಾನಸಭೆ ಚುನಾವಣೆಯನ್ನು ಜಿ.ಜನಾರ್ದನ ರೆಡ್ಡಿ ನೇತೃತ್ವದಲ್ಲಿ ಎದುರಿಸಲು ಅವಕಾಶ ನೀಡಬೇಕೆಂದು ಪಕ್ಷದ ನಾಯಕರಲ್ಲಿ ಮನವಿ ಮಾಡಿರುವೆ’ ಎಂದು ಸಂಸದ ಬಿ.ಶ್ರೀರಾಮುಲು ಮಂಗಳವಾರ ಇಲ್ಲಿ ತಿಳಿಸಿದರು.

‘ರೆಡ್ಡಿಯವರು ಈ ಭಾಗದ ಶಕ್ತಿ ಕೇಂದ್ರ. ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರುವ ಉದ್ದೇಶವಿದೆ. ಅವರು ಬಂದು ಸುಮ್ಮನೆ ತಮ್ಮ ಮನೆಯಲ್ಲಿ ಕುಳಿತಿದ್ದರೂ ನಾವು ಜಿಲ್ಲೆಯ ಎಲ್ಲ 9 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ಹೈದರಾಬಾದ್‌ ಕರ್ನಾಟಕ ಪ್ರದೇಶದ ಎಲ್ಲ 42 ಕ್ಷೇತ್ರಗಳಲ್ಲೂ ಬಲ ಬರುತ್ತದೆ’ ಎಂದು ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

‘ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಸಮಾವೇಶ ನಡೆಸಲು ನಮ್ಮ ಆಕ್ಷೇಪವೇನಿಲ್ಲ. ಆದರೆ ಅದಕ್ಕೆ ಮುನ್ನ, ಪಂಗಡಕ್ಕೆ ಈಗ ಉದ್ಯೋಗ ಮತ್ತು ಶಿಕ್ಷಣದಲ್ಲಿ ಇರುವ ಮೀಸಲಾತಿಯನ್ನು ಶೇ 7.5ಕ್ಕೆ ಹೆಚ್ಚಿಸಬೇಕು. ಆಗದಿದ್ದರೆ ಸಮಾವೇಶದಲ್ಲಿ ಆ ಬಗ್ಗೆ ಘೋಷಿಸಬೇಕು’ ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry