ದಿನೇಶ್‌ ಕಾರ್ತಿಕ್‌ಗೆ ಸ್ಥಾನ

7

ದಿನೇಶ್‌ ಕಾರ್ತಿಕ್‌ಗೆ ಸ್ಥಾನ

Published:
Updated:
ದಿನೇಶ್‌ ಕಾರ್ತಿಕ್‌ಗೆ ಸ್ಥಾನ

ನವದೆಹಲಿ (ಎಎಫ್‌ಪಿ): ಅನುಭವಿ ಆಟಗಾರ ದಿನೇಶ್‌ ಕಾರ್ತಿಕ್‌, ದಕ್ಷಿಣ ಆಫ್ರಿಕಾ ಎದುರಿನ ಮೂರನೇ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

ಈ ಮೊದಲು ತಂಡದಲ್ಲಿದ್ದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ವೃದ್ಧಿಮಾನ್‌ ಸಹಾ ಗಾಯಗೊಂಡು ಸರಣಿಯಿಂದ ಹೊರ ಬಿದ್ದಿದ್ದಾರೆ.

ಮೊದಲ ಪಂದ್ಯದಲ್ಲಿ 10 ಕ್ಯಾಚ್‌ ಹಿಡಿದು ದಾಖಲೆ ಬರೆದಿದ್ದ ಸಹಾ, ಮಂಡಿಯ ಗಾಯಕ್ಕೆ ಒಳಗಾಗಿದ್ದಾರೆ. ಹೀಗಾಗಿ ಅವರು ಎರಡನೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಪಾರ್ಥೀವ್‌ ಪಟೇಲ್‌ಗೆ ಆಡುವ ಬಳಗದಲ್ಲಿ ಸ್ಥಾನ ನೀಡಲಾಗಿತ್ತು.

‘ಅಭ್ಯಾಸದ ವೇಳೆ ಸಹಾ ಅವರ ಮಂಡಿಗೆ ಪೆಟ್ಟು ಬಿದ್ದಿದೆ. ಇದರಿಂದ ಚೇತರಿಸಿಕೊಂಡಿಲ್ಲ. ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಿರುವ ಕಾರಣ ಮೂರನೇ ಟೆಸ್ಟ್‌ಗೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ದಿನೇಶ್‌ ಕಾರ್ತಿಕ್‌ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಕಾರ್ತಿಕ್‌, ಎಂಟು ವರ್ಷಗಳ ನಂತರ ಟೆಸ್ಟ್‌ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. 23 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಅವರು 51 ಕ್ಯಾಚ್‌  ಪಡೆದಿದ್ದು, ಐದು ಸ್ಟಂಪಿಂಗ್‌ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry