ಪರಿಶಿಷ್ಟರ ಅನುದಾನ ಶೇ 100 ಪ್ರಗತಿಗೆ ಸೂಚನೆ

7

ಪರಿಶಿಷ್ಟರ ಅನುದಾನ ಶೇ 100 ಪ್ರಗತಿಗೆ ಸೂಚನೆ

Published:
Updated:

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನು ಸಂಪೂರ್ಣವಾಗಿ ಬಳಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎ.ದಯಾನಂದ್‌ ಸೂಚಿಸಿದರು.

ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಬಹುತೇಕ ಇಲಾಖೆಗಳು ಯೋಜನೆ ಅನುಷ್ಠಾನಗೊಳಿಸುವಲ್ಲಿ ಶೇ 50ರಷ್ಟು ಮಾತ್ರ ಪ್ರಗತಿ ಸಾಧಿಸಿವೆ. ಫೆಬ್ರುವರಿ ಅಂತ್ಯದೊಳಗೆ ಪೂರ್ಣಪ್ರಮಾಣ

ದಲ್ಲಿ ಅನುದಾನ ಬಳಕೆ ಮಾಡದಿದ್ದರೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಅಂಗವಿಕಲರ ಸಮಸ್ಯೆಗೆ ಕೂಡಲೇ ಸ್ಪಂದಿಸಿ: ‘ಅಂಗವಿಕಲರ ಸಮಸ್ಯೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು. ಅಲ್ಲದೆ, ಅವರಿಗೆ ತಲುಪಬೇಕಾದ ಯೋಜನೆಗಳನ್ನು ಶೀಘ್ರ ತಲುಪಿಸಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್. ಪಾಲಯ್ಯ ತಾಕೀತು ಮಾಡಿದರು.

ಅಂಗವಿಕಲರ ಕುಂದುಕೊರತೆ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ‘ಅಂಗವಿಕಲರಿಗೆ ಮೀಸಲಿಟ್ಟ ಶೇ 3ರಷ್ಟು ಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡದ ಗ್ರಾಮ ಪಂಚಾಯಿತಿಗಳಿಗೆ ನೋಟಿಸ್‌ ನೀಡಲಾಗುವುದು’ ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry