15 ದಿನದಲ್ಲಿ ಖಾತಾ ನೀಡುವಂತೆ ಸೂಚನೆ

7

15 ದಿನದಲ್ಲಿ ಖಾತಾ ನೀಡುವಂತೆ ಸೂಚನೆ

Published:
Updated:

ಬೆಂಗಳೂರು: ಬಿಬಿಎಂಪಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮಾರತ್ತಹಳ್ಳಿ ಉಪವಲಯದ ಕಂದಾಯ ವಿಭಾಗದ ಕಚೇರಿಗೆ ಮಂಗಳವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಕಂದಾಯ ವಸೂಲಾತಿಗೆ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಈ ವೇಳೆ, ಸ್ಥಳದಲ್ಲಿದ್ದ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ದೂರಿದರು. ಖಾತಾ ಮಾಡಿಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ಸ್ಪಂದಿಸಿದ ಸಮಿತಿಯ ಅಧ್ಯಕ್ಷ ಸಿ.ಆರ್‌.ಲಕ್ಷ್ಮಿನಾರಾಯಣ್‌ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 15 ದಿನಗಳೊಳಗೆ ಖಾತೆ ಮಾಡಿಕೊಡುವಂತೆ ಕಂದಾಯ ಅಧಿಕಾರಿಗೆ ಸೂಚಿಸಿದರು.

ಎಚ್ಎಎಲ್ ಹಾಗೂ ಜೀವನ್‌ ಬಿಮಾನಗರ ಉಪವಲಯ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಕೆಲ ಅಧಿಕಾರಿಗಳು 15 ದಿನಗಳಿಂದ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡದೇ ಇರುವುದು ಕಂಡುಬಂತು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಸೂಚಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry