ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಎಸ್‌ಟಿಪಿ: ಅಧಿಕಾರಿಗಳ ಜತೆ ಚರ್ಚಿಸಿ ಮಾರ್ಗಸೂಚಿ ಪ್ರಕಟ

Last Updated 16 ಜನವರಿ 2018, 20:25 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ಕೊಳಚೆ ನೀರು ಶುದ್ಧೀಕರಣ ಘಟಕಗಳ (ಎಸ್‌ಟಿಪಿ) ಮೇಲ್ವಿಚಾರಣೆ ಬಗ್ಗೆ ಇದ್ದ ಗೊಂದಲ ಪರಿಹಾರವಾಗಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ) ಇವುಗಳ ನಿರ್ವಹಣೆ ಬಗ್ಗೆ ಗಮನ ಹರಿಸಲಿದೆ.

ಅಪಾರ್ಟ್‌ಮೆಂಟ್‌ ಸಮುಚ್ಚಯ, ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು... ಹೀಗೆ ಖಾಸಗಿ ಕಟ್ಟಡಗಳಲ್ಲಿ ಅಳವಡಿಸಿರುವ ಎಸ್‌ಟಿಪಿಗಳು ಸಮರ್ಪ
ಕವಾಗಿ ಕಾರ್ಯನಿರ್ವಹಿಸುತ್ತಿದೆಯೋ ಇಲ್ಲವೋ ಎಂಬ ಬಗ್ಗೆ ಇನ್ನು ಮುಂದೆ ಮಂಡಳಿ ಮೇಲ್ವಿಚಾರಣೆ ನಡೆಸಲಿದೆ.

ಬೃಹತ್‌ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ ಎಸ್‌ಟಿಪಿಗಳನ್ನು ಅಳವಡಿಸಬೇಕು ಎಂದು ಜಲಮಂಡಳಿ ಹೇಳುತ್ತದೆ. ಆದರೆ, ಅವುಗಳ ಅಳವಡಿಕೆಗೆ ಮಾರ್ಗಸೂಚಿಗಳನ್ನು ನೀಡಿಲ್ಲ. ಎಸ್‌ಟಿಪಿಗಳಲ್ಲಿ ಸಮಸ್ಯೆ ಕಾಣಿಸಿಕೊಂಡರೆ ಜಲಮಂಡಳಿಯ ಅಧಿಕಾರಿಗಳು ಸ್ಪಂದಿಸುವುದಿಲ್ಲ. ಎಸ್‌ಟಿಪಿಗಳಿಗೆ ಅನುಮತಿ ನೀಡುವ ಕೆಎಸ್‌ಪಿಸಿಬಿ ಅಧಿಕಾರಿಗಳು ಸಹ ತಲೆಕೆಡಿಸಿಕೊಳ್ಳುತ್ತಿರಲಿಲ್ಲ.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್‌, ‘ಎಸ್‌ಟಿಪಿ ಕಾರ್ಯನಿರ್ವಹಣೆ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾರ್ಗಸೂಚಿಗಳು ಇರಲಿಲ್ಲ. ಈ ತಿಂಗಳ ಅಂತ್ಯದಲ್ಲಿ ಬಿಡಿಎ, ಬಿಬಿಎಂಪಿ, ಜಲಮಂಡಳಿ, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾರ್ಗಸೂಚಿಗಳನ್ನು ರೂಪಿಸುತ್ತೇವೆ’ ಎಂದು ಹೇಳಿದರು.

‘ಇವುಗಳ ನಿರ್ವಹಣೆಗೆ ಕೇಂದ್ರ ಮಾಲಿನ್ಯ ಮಂಡಳಿಯೂ ಯಾವುದೇ ಮಾರ್ಗಸೂಚಿಗಳನ್ನು ನೀಡಿಲ್ಲ. ಸಂಸ್ಕರಣೆಗೊಂಡಿರುವ ನೀರು ನಿಗದಿತ ಮಾನದಂಡಕ್ಕೆ ಅನುಗುಣವಾಗಿದೆಯೇ ಎನ್ನುವುದನ್ನಷ್ಟೆ ನಮ್ಮ ಅಧಿಕಾರಿಗಳು ಪರೀಕ್ಷಿಸುತ್ತಿದ್ದರು’ ಎಂದರು.

‘ಇಲ್ಲಿಯವರೆಗೆ ಎಸ್‌ಟಿಪಿಗಳನ್ನು ಅಳವಡಿಸಿಕೊಳ್ಳಬೇಕು ಎಂದಷ್ಟೇ ತಾಕೀತು ಮಾಡುತ್ತಿದ್ದೆವು. ಇದೇ ತಂತ್ರಜ್ಞಾನದ ಘಟಕ ಸ್ಥಾಪಿಸಬೇಕು ಹಾಗೂ ಎಸ್‌ಟಿಪಿ ತಯಾರಕರು ಅಗತ್ಯ ಅನುಮತಿಗಳನ್ನು ಪಡೆಯಬೇಕೆದಿರಲಿಲ್ಲ. ಎಸ್‌ಟಿಪಿ ಪೂರೈಸುವವರ ಮಾಹಿತಿಯನ್ನು ನಮ್ಮ ಬಳಿ ಇರಲಿಲ್ಲ. ಈ ಎಲ್ಲಾ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದರು.

471 ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ ಎಸ್‌ಟಿಪಿ: ಬೆಳ್ಳಂದೂರು ಮತ್ತು ವರ್ತೂರು ಕೆರೆ ಜಲಾನಯನ ಪ್ರದೇಶದಲ್ಲಿರುವ ಸುಮಾರು 873 ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ 471ರಲ್ಲಿ ಮಾತ್ರ ತ್ಯಾಜ್ಯ ನೀರು ಸಂಸ್ಕರಣಾ ಅಳವಡಿಸಿಕೊಳ್ಳವಾಗಿದೆ. 46ರಲ್ಲಿ ಘಟಕ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ, ಹಸಿರು ನ್ಯಾಯಪೀಠಕ್ಕೆ ನೀಡುವ ವರದಿಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT