ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ಸಚಿವರ ಮನೆ ಮುಂದೆ ನಾಳೆ ಪ್ರತಿಭಟನೆ

Last Updated 16 ಜನವರಿ 2018, 20:32 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಮನೆ ಮುಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಇದೇ 18 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

‘ಬೇಡಿಕೆ ಈಡೇರಿಸುವಂತೆ ಹತ್ತಾರು ಬಾರಿ ಪ್ರತಿಭಟನೆ ನಡೆಸಿದ್ದೇವೆ. ನ.4ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದೆವು. ಈ ವೇಳೆ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿ ಪ್ರತಿಭಟನಾಕಾರರ ಮನವೊಲಿಸಿದ್ದರು. ಆ ಬಳಿಕ ಇಲ್ಲಿಯವರೆಗೆ ಅವರು ಯಾವುದೇ ಸಭೆ ನಡೆಸದೆ ನಿರ್ಲಕ್ಷಿಸಿದ್ದಾರೆ’ ಎಂದರು.

ಪ್ರಮುಖ ಬೇಡಿಕೆಗಳು:

* ಮುಷ್ಕರದಲ್ಲಿ ಭಾಗಿಯಾಗಿದ್ದಕ್ಕೆ ವಜಾಗೊಳಿಸಿದ ನೌಕರರನ್ನು ಸೇವೆಗೆ ಹಿಂಪಡೆಯಬೇಕು

* ತಡೆ ಹಿಡಿದಿರುವ ವೇತನವನ್ನು ನೌಕರರಿಗೆ ನೀಡಬೇಕು

* ನೌಕರರ ವರ್ಗಾವಣೆ ಆದೇಶವನ್ನು ಬಿಡುಗಡೆ ಮಾಡಬೇಕು

* ಆಡಳಿತ ವರ್ಗದ ಕಾರ್ಮಿಕ ವಿರೋಧಿ ನೀತಿ ನಿಲ್ಲಬೇಕು

*ಬಾರ್ ಡ್ಯೂಟಿ ಹೆಸರಿನಲ್ಲಿ 2 ದಿನಕ್ಕೆ 36 ಗಂಟೆ ಕೆಲಸ ಮಾಡಿಸುವ ಪದ್ಧತಿ ಕೈಬಿಡಬೇಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT