ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜ್ಜಿನಪ್ಪಗೆ ‘ಸಾಹಿತ್ಯ ಶ್ರೀ’, ಭೀಮಜ್ಜ, ನಾಗರಾಜ್‌ಗೆ ‘ತತ್ವಶ್ರೀ’ ಪ್ರಶಸ್ತಿ

Last Updated 16 ಜನವರಿ 2018, 20:39 IST
ಅಕ್ಷರ ಗಾತ್ರ

ಚಿತ್ರದುರ್ಗ: ಬೆಂಗಳೂರಿನ ಪಟೇಲ್ ಪ್ರತಿಷ್ಠಾನ ಕೊಡಮಾಡುವ 2017ನೇ ಸಾಲಿನ ರಾಜ್ಯ ಮಟ್ಟದ ‘ಡಾ. ಮೀರಾಸಾಬಿಹಳ್ಳಿ ಶಿವಣ್ಣ ಸಾಹಿತ್ಯ ಶ್ರೀ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಜಿ.ಎಸ್.ಉಜ್ಜಿನಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ಪ್ರತಿಷ್ಠಾನದವರು ಪಟೇಲ್‌ ಬೊಮ್ಮನಗೌಡ ನೆನಪಿನಲ್ಲಿ ಕೊಡಮಾಡುವ ರಾಜ್ಯಮಟ್ಟದ ‘ತತ್ವಶ್ರೀ’ ಪ್ರಶಸ್ತಿಗೆ 2016ರ ಸಾಲಿಗೆ ಹಿರಿಯೂರಿನ ಮಾರೇನಹಳ್ಳಿಯ ತತ್ವಪದ ಸಾಧಕ ಭೀಮಜ್ಜ ಮೇಷ್ಟ್ರು ಮತ್ತು 2017ನೇ ಸಾಲಿಗೆ ಸಾಹಿತಿ ಕಣಜನಹಳ್ಳಿ ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರಿನ ಪಟೇಲ್ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಿ.ಎಸ್. ಲಿಂಗರಾಜುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷ ಜಾನಪದ ತಜ್ಞ ಡಾ. ಮೀರಾಸಾಬಿಹಳ್ಳಿ ಶಿವಣ್ಣ ಅವರ ಹೆಸರಿನಲ್ಲಿ ನೀಡುವ ‘ಸಾಹಿತ್ಯಶ್ರೀ’ ಪ್ರಶಸ್ತಿಯು ₹10 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ಹೊಂದಿದೆ. ಪಟೇಲ್ ಬೊಮ್ಮನಗೌಡ ನೆನಪಿನಲ್ಲಿ ಕೊಡಮಾಡುವ ’ತತ್ವಶ್ರೀ’ ‍ಪ್ರಶಸ್ತಿಯು ₹5 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಇದೇ 20ರಂದು ಹಿರಿಯೂರಿನ ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT