‘ದೇಶದಲ್ಲಿಯೇ ಕರ್ನಾಟಕ ಮಾದರಿ’

7

‘ದೇಶದಲ್ಲಿಯೇ ಕರ್ನಾಟಕ ಮಾದರಿ’

Published:
Updated:

ವಿಜಯಪುರ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಹತ್ತಾರು ಭಾಗ್ಯಗಳನ್ನು ಜನಸಾಮಾನ್ಯರಿಗೆ ಕಲ್ಪಿಸುವ ಮೂಲಕ ದೇಶದಲ್ಲಿಯೇ ಕರ್ನಾಟಕ ಮಾದರಿಯಾಗಿದೆ ಎಂದು ಶಾಸಕ ಮಕ್ಬೂಲ ಬಾಗವಾನ ಹೇಳಿದರು.

ನಗರದ ಶಾಸಕರ ಕಾರ್ಯಾಲಯದಲ್ಲಿ ನಡೆದ ನಗರದಲ್ಲಿ ವಾಸಿಸುತ್ತಿರುವ ಬಡವರಿಗಾಗಿ ಸರ್ಕಾರದ ಸೌಲಭ್ಯಗಳ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಬಡವರಿಗೆ ಸರ್ಕಾರದಿಂದ ಸಿಗುವಂತಹ ಅನೇಕ ಸೌಲಭ್ಯಗಳನ್ನು ಬಡ ಜನರಿಗೆ ಯಾವುದೇ ತೊಂದರೆ ಇಲ್ಲದೆ, ಅವರ ಮನೆ ಬಾಗಿಲಿಗೆ ತಲುಪುವಂತೆ ಮಾಡಿದ್ದೇನೆ. ಶೀಘ್ರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಳೆದ ನಾಲ್ಕುವರಿ ವರ್ಷಗಳ ನಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸೋಣ ಎಂದರು.

50 ಫಲಾನುಭವಿಗಳಿಗೆ ವಿಧವಾ ಪಿಂಚಣಿ, ಸಂಧ್ಯಾ ಸುರಕ್ಷಾ, ಇಂದಿರಾ ಗಾಂಧಿ, ಅಂಗವಿಕಲರ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸೈಯದ್‌ ಅಫ್ತಾಬ್‌ ಖಾದ್ರಿ, ಜಲನಗರ ಬ್ಲಾಕ್ ಅಧ್ಯಕ್ಷೆ ಮಂಜುಳಾ ಗಾಯಕವಾಡ, ನಗರ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ್‌ ಇಂಡಿಕರ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry