ದಶಮಾನೋತ್ಸವ ಲಾಂಛನ ಬಿಡುಗಡೆ

7

ದಶಮಾನೋತ್ಸವ ಲಾಂಛನ ಬಿಡುಗಡೆ

Published:
Updated:

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಜಿಲ್ಲಾ ದಶಮಾನೋತ್ಸವ ಲಾಂಛನ ಬಿಡುಗಡೆ ಮಾಡಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ದೀಪ್ತಿ ಕಾನಡೆ, ‘ಚಿಕ್ಕಬಳ್ಳಾಪುರ ನೂತನ ಜಿಲ್ಲೆಯಾಗಿ ಅಸ್ತಿತ್ವಕ್ಕೆ ಬಂದು 10 ವರ್ಷಗಳನ್ನು ಪೂರೈಸಿರುವ ಪ್ರಯುಕ್ತ ನಗರದ ಸರ್‌.ಎಂ.ವಿ.ಜಿಲ್ಲಾ ಕ್ರೀಡಾಂಗಣದಲ್ಲಿ ಫೆಬ್ರುವರಿ 2 ರಿಂದ ಮೂರು ದಿನಗಳ ಕಾಲ ದಶಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಪ್ರತಿ ತಾಲ್ಲೂಕಿನಲ್ಲಿ ಒಂದು ದಿನ ದಶಮಾನೋತ್ಸವ ಕಾರ್ಯಕ್ರಮ ಆಯೋಜಿಸಲು ತೀರ್ಮಾ ನಿಸಲಾಗಿದೆ’ ಎಂದು ಹೇಳಿದರು.

‘ಜ.20 ರಂದು ಗೌರಿಬಿದನೂರು, 22 ರಂದು ಶಿಡ್ಲಘಟ್ಟ, 29 ರಂದು ಚಿಂತಾಮಣಿ ಮತ್ತು ಬಾಗೇಪಲ್ಲಿ, 31 ರಂದು ಗುಡಿಬಂಡೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ದಶಮಾನೋತ್ಸವ ಕಾರ್ಯಕ್ರಮ ನಡೆಲಿವೆ. ಈಗಾಗಲೇ ತಾಲ್ಲೂಕು, ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈಗಾಗಲೇ ಕ್ರೀಡಾಕೂಟಗಳನ್ನು ಆಯೋಜಿಸ ಲಾಗಿದೆ’ ಎಂದು ತಿಳಿಸಿದರು.

‘ಫೆ.2ರಂದು ಬೆಳಿಗ್ಗೆ 6ಕ್ಕೆ ನಂದಿ ಗ್ರಾಮದ ಭೋಗನಂದೀಶ್ವರ ದೇವಾಲ ಯದ ಬಳಿ ದೀಪ ಬೆಳಗುವ ಮೂಲಕ ಸಾಂಕೇತಿಕವಾಗಿ ದಶಮಾನೋತ್ಸವ ಉದ್ಘಾಟಿಸಿ, ಸುಲ್ತಾನ್‌ಪೇಟೆ ಮೂಲಕ ಕಾಲ್ನಡಿಗೆಯಲ್ಲಿ ಎಲ್ಲಾ ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಸಂಘ, ಸಂಸ್ಥೆಗಳ ಕಾರ್ಯಕರ್ತರು ಸೇರಿ ನಂದಿ ಬೆಟ್ಟಕ್ಕೆ ವಾಕಥಾನ್‌ ನಡೆಸಲಾಗುತ್ತದೆ’ ಎಂದರು.

‘ಅದೇ ದಿನ ಮಧ್ಯಾಹ್ನ 3ಕ್ಕೆ ತಾಲ್ಲೂಕು ಕಚೇರಿ ಬಳಿ ಜಿಲ್ಲಾ ಉಸ್ತುವಾರಿ ಸಚಿವರು ದಶಮಾನೋ ತ್ಸವ ಮೆರವಣಿಗೆಗೆ ಚಾಲನೆ ನೀಡಿ, ಬಳಿಕ ಜಿಲ್ಲಾ ಕ್ರೀಡಾಂಗಣದಲ್ಲಿ ಮುಖ್ಯ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಜೆ 6 ಗಂಟೆಯಿಂದ ರಾತ್ರಿ 11.30ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಹೇಳಿದರು.

‘ದಶಮಾನೋತ್ಸವದ ಮೂರು ದಿನಗಳು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರ ವರೆಗೆ ಮಹಿಳಾ ಸಬಲೀಕರಣ, ಆರೋಗ್ಯ, ಶಿಕ್ಷಣ, ಸಾಹಿತ್ಯ, ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳ ಬಗಹ್ಗೆ ಅಂಬೇಡ್ಕರ್ ಭವನದಲ್ಲಿ ವಿಚಾರ ಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಮುಖ್ಯ ವೇದಿಕೆಯಲ್ಲಿ ಪ್ರತಿ ದಿನ ಸಂಜೆ 4 ರಿಂದ ರಾತ್ರಿ 7ರ ವರೆಗೆ ಸ್ಥಳೀಯ ಕಲಾವಿದರಿಗೆ ಜಿಲ್ಲೆಯ ಮುಖ್ಯ ಕಲಾ ಪ್ರಕಾರಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗುತ್ತದೆ’ ಎಂದು ತಿಳಿಸಿದರು.

‘ದಶಮಾನೋತ್ಸವದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಸುಮಾರು 200 ಮಳಿಗೆಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕುಶಲಕರ್ಮಿಗಳು, ಕೃಷಿಕರು, ಉದ್ದಿಮೆದಾರರು, ವರ್ತಕರು ಮಳಿಗೆ ಸ್ಥಾಪಿಸಲಿದ್ದಾರೆ. ದಶಮಾನೋತ್ಸವ ಅಂಗವಾಗಿ ಸ್ಮರಣ ಸಂಚಿಕೆ ಮತ್ತು ಜಿಲ್ಲೆಯ ಪ್ರವಾಸೋದ್ಯಮ ಸ್ಥಳ ಕೈಪಿಡಿ ಹೊರ ತರಲು ತೀರ್ಮಾನಿಸಲಾಗಿದೆ’ ಎಂದರು.

‘ದಶಮಾನೋತ್ಸವ ಸಂದರ್ಭದಲ್ಲಿ ಹಸುವಿನ ಹಾಲು ಕರೆಯುವ ಸ್ಪರ್ಧೆ, ಉತ್ತಮ ರಾಸುಗಳ ಪ್ರದರ್ಶನ ಮತ್ತು ಶ್ವಾನ ಪ್ರದರ್ಶನ ಏರ್ಪಡಿಸಲಾಗುತ್ತದೆ. ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ, ಸಂಗೀತ, ನೃತ್ಯ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಸ್ಥಳೀಯ ಕಲಾವಿದರು ಮತ್ತು ಪ್ರತಿಭಾ ವಂತರನ್ನು ಬೆಳಕಿಗೆ ತರುವುದು ಈ ಕಾರ್ಯಕ್ರಮದ ಧ್ಯೇಯ’ ಎಂದು ಹೇಳಿದರು.

ಶಾಸಕ ಡಾ.ಕೆ.ಸುಧಾಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ, ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಹೆಚ್ಚುವರಿ ಜಿಲ್ಲಾ ಧಿಕಾರಿ ಕೆ.ಎನ್.ಅನುರಾಧಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿ ಗುರುದತ್ ಹೆಗಡೆ, ಎಸ್‌ಪಿ ಕಾರ್ತಿಕ್‌ ರೆಡ್ಡಿ ಉಪಸ್ಥಿತರಿದ್ದರು.

* *

ಚಿಕ್ಕಬಳ್ಳಾಪುರ ನೂತನ ಜಿಲ್ಲೆಯಾಗಿ ಹತ್ತು ವರ್ಷಗಳ ಹಾದಿ ಸವೆಸಿದ ಮೆಲುಕು ಹಾಕುವ ಈ ಮಹತ್ವದ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ

ದೀಪ್ತಿ ಕಾನಡೆ ಜಿಲ್ಲಾಧಿಕಾರಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry