ವಕ್ಫ್ ಮುಖ್ಯಸ್ಥರ ವಿರುದ್ಧ ಎಫ್‌ಐಆರ್

7

ವಕ್ಫ್ ಮುಖ್ಯಸ್ಥರ ವಿರುದ್ಧ ಎಫ್‌ಐಆರ್

Published:
Updated:

ನವದೆಹಲಿ: ಮುಸ್ಲಿಂ ಸಮುದಾಯ ಮತ್ತು ಅದರ ಶಿಕ್ಷಣ ಸಂಸ್ಥೆಗಳ ವಿರುದ್ಧ ದ್ವೇಷ ಬಿತ್ತುವ ಕೆಲಸ ಮಾಡಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ವಾಸಿಮ್ ರಿಜ್ವಿ ಅವರ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ.

ಶಿಯಾ, ಸುನ್ನಿ ಧರ್ಮಗುರುಗಳು ಒಟ್ಟಾಗಿ ಎಫ್‌ಐಆರ್ ದಾಖಲಿಸಿದ್ದಾರೆ.

‘ಎಷ್ಟು ಮದರಸಾಗಳು ಸಮಾಜಕ್ಕೆ ಎಂಜಿನಿಯರ್‌ಗಳು, ವೈದ್ಯರು ಹಾಗೂ ಐಎಎಸ್ ಅಧಿಕಾರಿಗಳನ್ನು ನೀಡಿವೆ? ಆದರೆ, ಕೆಲವು ಮದರಸಾಗಳು ಉಗ್ರರ

ನ್ನಂತೂ ನೀಡಿವೆ’ ಎಂದು ರಿಜ್ವಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry