ವಯೋಮಿತಿ ಏರಿಕೆ ಬೇಡ

7

ವಯೋಮಿತಿ ಏರಿಕೆ ಬೇಡ

Published:
Updated:

ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಏರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಒಂದು ವೇಳೆ ಸರ್ಕಾರ ಈ ನಿರ್ಧಾರ ಕೈಗೊಂಡರೆ, ಅದು ಲಕ್ಷಾಂತರ ನಿರುದ್ಯೋಗಿಗಳಿಗೆ ಮಾಡುವ ಅನ್ಯಾಯ ಎನಿಸಲಿದೆ.

ರಾಜ್ಯದಲ್ಲಿ ಸಾವಿರಾರು ಯುವಕರು ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇಂಥ ಸ್ಥಿತಿಯಲ್ಲಿ ಸೇವೆಯಲ್ಲಿ

ರುವ ನೌಕರರಿಗೇ ಇನ್ನಷ್ಟು ಕಾಲ ಸೇವೆ ಸಲ್ಲಿಸಲು ಅವಕಾಶ ಕೊಟ್ಟರೆ ಯುವಕರಿಗೆ ದ್ರೋಹ ಬಗೆದಂತಾಗುತ್ತದೆ. ನಿವೃತ್ತಿ ವಯಸ್ಸು ಏರಿಸುವ ಬದಲು ಸರ್ಕಾರ ಅದನ್ನು 58ಕ್ಕೆ ಇಳಿಸುವ ಮೂಲಕ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಲು ಮುಂದಾಗಬೇಕು.

-ಬಿ. ಚಿದಾನಂದಮೂರ್ತಿ, ಬೆಂಗಳೂರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry