ಕೃಷ್ಣ, ವಾಲಿಕಾರಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ

7

ಕೃಷ್ಣ, ವಾಲಿಕಾರಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ

Published:
Updated:

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2018ನೇ ಸಾಲಿನ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಕೆ.ಆರ್. ಪೇಟೆ ಕೃಷ್ಣ ಮತ್ತು ಸಾಹಿತಿ ಚನ್ನಣ್ಣ ವಾಲಿಕಾರ ಭಾಜನರಾಗಿದ್ದಾರೆ.

ತಲಾ ₹ 25,000 ನಗದು ಪುರಸ್ಕಾರವನ್ನು ಪ್ರಶಸ್ತಿ ಒಳಗೊಂಡಿದೆ. ಫೆ.26ರಂದು ಸಾಹಿತಿ ಚಂದ್ರಶೇಖರ ಕಂಬಾರ ಪ್ರಶಸ್ತಿ ಪ್ರದಾನ ಮಾಡುವರು.

2012–15ರ ಅವಧಿಯಲ್ಲಿ ಕಸಾಪ ನಗರ ಘಟಕದ ಅಧ್ಯಕ್ಷರಾಗಿದ್ದ ಟಿ. ತಿಮ್ಮೇಶ್ ಸ್ಥಾಪಿಸಿರುವ ದತ್ತಿನಿಧಿಯಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry