ಜೆಡಿಎಸ್‌ನ ಇಬ್ಬರು ಶಾಸಕರು ಇಂದು ಬಿಜೆಪಿಗೆ?

7

ಜೆಡಿಎಸ್‌ನ ಇಬ್ಬರು ಶಾಸಕರು ಇಂದು ಬಿಜೆಪಿಗೆ?

Published:
Updated:

ರಾಯಚೂರು/ಬೆಂಗಳೂರು: ಜೆಡಿಎಸ್‌ ಶಾಸಕರಾದ ಮಾನಪ್ಪ ವಜ್ಜಲ(ಲಿಂಗಸುಗೂರು) ಮತ್ತು ಡಾ.ಶಿವರಾಜ ಪಾಟೀಲ (ರಾಯಚೂರು ನಗರ) ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.

‘ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಈ ಇಬ್ಬರು ಗುರುವಾರ ಪಕ್ಷ ಸೇರಲಿದ್ದಾರೆ’ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬೆಳಿಗ್ಗೆ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಈ ಇಬ್ಬರು ಶಾಸಕರು, ಬಳಿಕ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.

‘ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳದ ಈ ಇಬ್ಬರಿಗೆ ಟಿಕೆಟ್ ನೀಡಬಾರದು’ ಎಂದು ರಾಯಚೂರು ಜಿಲ್ಲೆಯ ಜೆಡಿಎಸ್ ಪದಾಧಿಕಾರಿಗಳು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಮಾನಪ್ಪ ವಜ್ಜಲ ಬೆಂಬಲಕ್ಕೆ ನಿಂತಿರುವ ಲಿಂಗಸುಗೂರು ತಾಲ್ಲೂಕು ಜೆಡಿಎಸ್ ಪದಾಧಿಕಾರಿಗಳು ಪಕ್ಷದ ಅಧ್ಯಕ್ಷ ಕುಮಾರಸ್ವಾಮಿಗೆ ಈಗಾಗಲೇ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry