‘ಗಣರಾಜ್ಯೋತ್ಸವ: ಸಂವಿಧಾನ‌ ಸಾರಾಂಶ ಪಠಿಸಿ’

5

‘ಗಣರಾಜ್ಯೋತ್ಸವ: ಸಂವಿಧಾನ‌ ಸಾರಾಂಶ ಪಠಿಸಿ’

Published:
Updated:

ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಸಾರ್ವಜನಿಕ ಸಂಸ್ಥೆಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸಬೇಕು ಎಂದು ಭಾರತೀಯ ರಿಪಬ್ಲಿಕನ್‌ ಪಕ್ಷದ (ಆರ್‌ಪಿಐ) ರಾಜ್ಯ ಘಟಕದ ಅಧ್ಯಕ್ಷ ಎಂ. ವೆಂಕಟಸ್ವಾಮಿ ಮನವಿ ಮಾಡಿದರು.

‘ಸಂವಿಧಾನದಲ್ಲಿ ತಿಳಿಸಿರುವ ಮೌಲ್ಯಗಳನ್ನು ಅನುಷ್ಠಾನಗೊಳಿಸುವುದಾಗಿ ಪ್ರತಿಜ್ಞೆ ಸ್ವೀಕರಿಸುವಂತೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.

‘ಇತ್ತೀಚೆಗೆ ಅಂಬೇಡ್ಕರ್‌ ಹಾಗೂ ಸಂವಿಧಾನದ ಬಗ್ಗೆ ವಿರೋಧದ ಮಾತುಗಳು ಕೇಳಿಬರುತ್ತಿವೆ. ಇಂತಹವುಗಳನ್ನು ನಿಯಂತ್ರಿಸಬೇಕಾದರೆ ಈ ಬಗ್ಗೆ ಅರಿವು ಮೂಡಿಸಬೇಕು’ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry