ತ್ರಿಪುರ, ನಾಗಾಲ್ಯಾಂಡ್‌, ಮೇಘಾಲಯ ರಾಜ್ಯಗಳಲ್ಲಿ ಫೆ.18, 27ರಂದ ವಿಧಾನಸಭೆ ಚುನಾವಣೆ

7

ತ್ರಿಪುರ, ನಾಗಾಲ್ಯಾಂಡ್‌, ಮೇಘಾಲಯ ರಾಜ್ಯಗಳಲ್ಲಿ ಫೆ.18, 27ರಂದ ವಿಧಾನಸಭೆ ಚುನಾವಣೆ

Published:
Updated:

ನವದೆಹಲಿ: ಈಶಾನ್ಯ ಭಾರತದ ಮೂರು ರಾಜ್ಯಗಳಾದ ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರ ರಾಜ್ಯಗಳಿಗೆ ಫೆಬ್ರುವರಿ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.

ಈ ಮೂರು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ತ್ರಿಪುರ ರಾಜ್ಯದಲ್ಲಿ ಫೆಬ್ರುವರಿ 18, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ಫೆಬ್ರುವರಿ 27 ರಂದು ಚುನಾವಣೆ ನಡೆಯಲಿದೆ. ಮೂರು ರಾಜ್ಯಗಳ ಮತ ಎಣಿಕೆ ಮಾರ್ಚ್ 3 ರಂದು ನಡೆಯಲಿದೆ.

ಕೇಂದ್ರದ ಮುಖ್ಯ ಚುನಾವಣಾ ಆಯುಕ್ತ ಎ.ಕೆ. ಜ್ಯೋತಿ ಸುದ್ದಿಗೋಷ್ಠಿ ನಡೆಸಿ ಮೂರು ಈಶಾನ್ಯ ರಾಜ್ಯಗಳ ಚುನಾವಣೆ ದಿನಾಂಕವನ್ನು ಪ್ರಕಟಿಸಿದರು.

ಇಂದಿನಿಂದಲೇ  ಆ ರಾಜ್ಯಗಳಲ್ಲಿ ಚುನಾವಣೆ ನೀತಿಸಂಹಿತೆ ಜಾರಿಗೆ ಬರಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry