ನವದೆಹಲಿ: ಈಶಾನ್ಯ ಭಾರತದ ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರ ರಾಜ್ಯಗಳ ವಿಧಾನಸಭೆಗಳಿಗೆ ಫೆ. 18 ಮತ್ತು ಫೆ. 27ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 3 ರಂದು ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಎ.ಕೆ. ಜ್ಯೋತಿ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.