ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಪನಹಳ್ಳಿ: ಕುಡಿಯುವ ನೀರಿಗೆ ಸಮಸ್ಯೆ

ಬರಿದಾದ ತುಂಗಭದ್ರಾ ನದಿ; ಜಾಕ್‌ವೆಲ್‌ಗೆ ನೀರಿಲ್ಲ
Last Updated 18 ಜನವರಿ 2018, 10:10 IST
ಅಕ್ಷರ ಗಾತ್ರ

ಹರಪನಹಳ್ಳಿ: ತಾಲ್ಲೂಕಿನ ಹಲುವಾಗಲು ಗ್ರಾಮದ ಬಳಿ ಹಾದು ಹೋಗಿರುವ ತುಂಗಭದ್ರಾ ನದಿ ಬಹುತೇಕ ಬರಿದಾಗಿದ್ದು, ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಕಾಡುತ್ತಿದೆ.

ಗರ್ಭಗುಡಿ ಗ್ರಾಮದ ಬಳಿಯಿರುವ ಜಾಕ್‌ವೆಲ್ ಮೂಲಕ ಹರಪನಹಳ್ಳಿ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ನದಿಯಲ್ಲಿ ನೀರು ಇಲ್ಲದಿರುವುದರಿಂದ ಜಾಕ್‌ವೆಲ್‌ಗೆ ನೀರು ಸಿಗುತ್ತಿಲ್ಲ. ಹೀಗಾಗಿ ಗುಂಡಿಯಲ್ಲಿ ನಿಂತಿರುವ ನೀರನ್ನು ಬುಧವಾರದಿಂದ 7.5 ಇಂಚಿನ 3 ಮೋಟರ್ ಪಂಪ್ ಮೂಲಕ ಜಾಕ್‌ವೆಲ್‌ಗೆ ಸರಬರಾಜು ಮಾಡಲಾಗುತ್ತಿದೆ.

ಗುಂಡಿಯಲ್ಲಿ ನೀರು ಸಂಗ್ರಹವಾಗಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ಇನ್ನೂ 2 ತಿಂಗಳು ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೆ ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡಲಿಲ್ಲವೆಂದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗಬಹುದು. ಹೀಗಾಗಿ ಪಟ್ಟಣದ ಸಾರ್ವಜನಿಕರು ನೀರನ್ನು ಮಿತವಾಗಿ ಬಳಕೆ ಮಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಐ.ಬಸವರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT