ಹರಿಯಾಣ: ಮತ್ತೊಂದು ಅತ್ಯಾಚಾರ ಪ್ರಕರಣ

7

ಹರಿಯಾಣ: ಮತ್ತೊಂದು ಅತ್ಯಾಚಾರ ಪ್ರಕರಣ

Published:
Updated:

ಚಂಡಿಗಡ: ಮೇಲಿಂದ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿರುವ ಹರಿಯಾಣದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ನೆರೆಮನೆಯ ವ್ಯಕ್ತಿ ಹಾಗೂ ಮತ್ತೊಬ್ಬ ಸೇರಿ ಬುಧವಾರ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು 20 ವರ್ಷದ ವಿವಾಹಿತೆ ಪೊಲೀಸರಿಗೆ ದೂರು ನೀಡಿದ್ದಾರೆ.

‘ನಾನು ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ್ದಾರೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೆದರಿಸಿದ್ದರು’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಆರು ತಿಂಗಳ ಹಿಂದಷ್ಟೇ ಅವರಿಗೆ ಮದುವೆ ಆಗಿತ್ತು.

‘ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು’ ಎಂದು ಫತೇಹಾಬಾದ್‌ನ ಎಸ್ಪಿ ದೀಪಕ್ ಸಹರಾನ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry