‘ವಿಧಾನಸಭೆ: ಎಎಪಿಯಿಂದ ಸ್ಪರ್ಧೆ’

7

‘ವಿಧಾನಸಭೆ: ಎಎಪಿಯಿಂದ ಸ್ಪರ್ಧೆ’

Published:
Updated:

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧವಿದ್ದು, ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಪಕ್ಷದ ರಾಜ್ಯ ಸಹ ಸಂಚಾಲಕ ಶಿವಕುಮಾರ ಚೆಂಗಲರಾಯ ತಿಳಿಸಿದರು.

‘ಮೂರು ಪಕ್ಷಗಳ ಆಳ್ವಿಕೆಯಿಂದ ಬೇಸತ್ತಿರುವ ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ. ಆಡಳಿತ ಪಕ್ಷ ಕೆಲಸ ಮಾಡದಿದ್ದರೂ ವಿರೋಧ ಪಕ್ಷಗಳು ಪ್ರಶ್ನಿಸುತ್ತಿಲ್ಲ’ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್‌ ಗುಪ್ತಾ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರಾಜ್ಯದಾದ್ಯಂತ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಅವರು ಟೀಕಿಸಿದರು.

ದೆಹಲಿಯಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಎಎಪಿ ಸರ್ಕಾರ ಕ್ರಮಕೈಗೊಂಡಿದೆ. ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಸಾಮಾನ್ಯ ಜನರ ಕೈಗೆಟುಕುವಂತೆ ಮಾಡಿದೆ ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry