ಇ.ಡಿ ಮುಂದೆ ಹಾಜರಾದ ಕಾರ್ತಿ

7

ಇ.ಡಿ ಮುಂದೆ ಹಾಜರಾದ ಕಾರ್ತಿ

Published:
Updated:

ನವದೆಹಲಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾದರು.

ಇದಕ್ಕೂ ಮೊದಲು ಕಾರ್ತಿ ಅವರು ಎರಡು ಬಾರಿ ತಮ್ಮ ಪ್ರತಿನಿಧಿಯನ್ನು ಕಳುಹಿಸಿದ್ದರು. ಆದರೆ ತನಿಖಾಧಿಕಾರಿ ಮುಂದೆ ಖುದ್ದಾಗಿ ಹಾಜರಾಗುವಂತೆ ಇ.ಡಿ, ಕಾರ್ತಿ ಅವರಿಗೆ ಸೂಚಿಸಿತ್ತು.

ಕಾರ್ತಿ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್‌ ಅಡಿಯಲ್ಲಿ ಇ.ಡಿ ಈ ತನಿಖೆ ನಡೆಸುತ್ತಿದೆ.

ಏರ್‌ಸೆಲ್‌–ಮ್ಯಾಕ್ಸಿಸ್‌ ಒಪ್ಪಂದಕ್ಕೆ ಸಂಬಂಧಿಸಿದ ಮತ್ತೊಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರ್ತಿ ಹಾಗೂ ಇತರರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ಶನಿವಾರ ಶೋಧ ನಡೆಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry