ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳಖೇಡ ಉತ್ತರಾದಿ ಮಠದಲ್ಲಿ ಕಳ್ಳತನ

Last Updated 19 ಜನವರಿ 2018, 5:16 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯ ಸೇಡಂ ತಾಲ್ಲೂಕು ಮಳಖೇಡ ಉತ್ತರಾದಿ ಮಠದ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು 30 ಕೆ.ಜಿ ಬೆಳ್ಳಿಯ ಆಭರಣಗಳು, ಹುಂಡಿ ಮತ್ತು ಬೆಲೆ ಬಾಳುವ ಪೂಜಾ ಸಾಮಗ್ರಿಗಳನ್ನು ದೋಚಿದ್ದಾರೆ.

ಮಠದಲ್ಲಿದ್ದ ಎಲ್ಲ ಲಾಕರ್‌ಗಳನ್ನು ಮುರಿದು ಈ ಕೃತ್ಯ ಎಸಗಿದ್ದಾರೆ.

ಮೂರು ವರ್ಷಗಳ ಹಿಂದೆಯೂ ಮಠದಲ್ಲಿ ಕಳ್ಳತನ ನಡೆದಿತ್ತು. ಆದರೆ ಇದುವರೆಗೂ ಪೊಲೀಸರು ಪ್ರಕರಣವನ್ನು ಭೇದಿಸಿಲ್ಲ.

ಪೊಲೀಸರು ದರೋಡೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಳ್ಳರನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿ ಮಠದ ವೆಂಕಣ್ಣಾಚಾರ್ಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT