ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ

7

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ

Published:
Updated:
ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ

ಬೆಂಗಳೂರು: ನಗರದ ಬೆಳ್ಳಂದೂರು ಕೆರೆಯಲ್ಲಿ ಶುಕ್ರವಾರ ಮತ್ತೆ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ಹೊತ್ತಿಕೊಂಡಿರುವುದರಿಂದ ಸುತ್ತಲಿನ ಪ್ರದೇಶದಲ್ಲಿ ಹೊಗೆ ವ್ಯಾಪಕವಾಗಿ ಆವರಿಸಿತ್ತು.

ಬೆಂಕಿಯಿಂದ ಹೆಚ್ಚಿನ ಹೊಗೆ ಮೇಲೇಳುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಟಿ ನಗರ ಸಮೀಪದ ಚೆಲ್ಲಾಘಟ್ಟ ಬದಿ ಕೆರೆಯಲ್ಲಿ ಮಧ್ಯಾಹ್ನ 12ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬಿಬಿಎಂಪಿ ಅಧಿಕಾರಿಗಳು ಈ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ವಿಷಕಾರಕ ರಾಸಾಯನಿಕ ವಸ್ತುಗಳು ಹೆಚ್ಚಿರುವುದರ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

910 ಎಕರೆ ಪ್ರದೇಶದಲ್ಲಿ ವಿಸ್ತಾರವಾಗಿ ಹರಡಿಕೊಂಡಿರುವ ಈ ಕೆರೆಯಲ್ಲಿ ವರ್ಷದ ಹಿಂದೆ ಬೆಂಕಿ ಕಾಣಿಸಿಕೊಂಡಿತ್ತು. ಮತ್ತೆ ಈಗ ಬೆಂಕಿ ಹೊತ್ತಿಕೊಂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry