ಎದುರಾಳಿ ತಂಡದ 20 ವಿಕೆಟ್‌ ಪಡೆದ ನಮ್ಮ ತಂಡಕ್ಕೆ ಗೆಲ್ಲುವ ಸಾಧ್ಯತೆ ಇತ್ತು: ಎಂ.ಎಸ್‌. ದೋನಿ

7

ಎದುರಾಳಿ ತಂಡದ 20 ವಿಕೆಟ್‌ ಪಡೆದ ನಮ್ಮ ತಂಡಕ್ಕೆ ಗೆಲ್ಲುವ ಸಾಧ್ಯತೆ ಇತ್ತು: ಎಂ.ಎಸ್‌. ದೋನಿ

Published:
Updated:
ಎದುರಾಳಿ ತಂಡದ 20 ವಿಕೆಟ್‌ ಪಡೆದ ನಮ್ಮ ತಂಡಕ್ಕೆ ಗೆಲ್ಲುವ ಸಾಧ್ಯತೆ ಇತ್ತು: ಎಂ.ಎಸ್‌. ದೋನಿ

ಚೆನ್ನೈ: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 135 ರನ್‌ಗಳಿಂದ ಸೋತಿತ್ತು. ‘ಈ ಪಂದ್ಯದ ಎರಡು ಇನಿಂಗ್ಸ್‌ಗಳಲ್ಲಿ ಭಾರತದ ಬೌಲರ್‌ಗಳು ಎದುರಾಳಿ ತಂಡದ 20 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ, ತಂಡದ ಪ್ರಮುಖ ಆಟಗಾರರು ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದು, ತಂಡದ ಸೋಲಿಗೆ ಕಾರಣವಾಯಿತು’ ಎಂದು ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌. ದೋನಿ ಹೇಳಿದ್ದಾರೆ.

ಚೆನ್ನೈನಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಟೆಸ್ಟ್‌ ಪಂದ್ಯ ಗೆಲ್ಲಲು ಎದುರಾಳಿ ತಂಡದ 20 ವಿಕೆಟ್‌ಗಳನ್ನು ಪಡೆಯುವ ಅಗತ್ಯತೆ ಇರುತ್ತದೆ. 20 ವಿಕೆಟ್‌ ಪಡೆದರೆ ಸುಲಭವಾಗಿ ಗೆಲುವು ಸಾಧಿಸಬಹುದು’ ಎಂದಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ವಿರಾಟ್‌ ಪಡೆ ಅತಿಥೇಯರ ವಿರುದ್ಧ ನಡೆದ ಎರಡೂ ಟೆಸ್ಟ್ ಪಂದ್ಯಗಳಲ್ಲೂ ಸೋಲು ಅನುಭವಿಸಿದೆ.

ಕೇಪ್‌ಟೌನ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು ಭಾರತ 72 ರನ್‌ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ ಎಂಬ ಕಾರಣಕ್ಕೆ ಆರಂಭಿಕ ಆಟಗಾರ ಶಿಖರ್‌ ಧವನ್‌ ಹಾಗೂ ವೇಗಿ ಭುವನೇಶ್ವರ್‌ ಕುಮಾರ್‌ ಅವರನ್ನು ಎರಡನೇ ಪಂದ್ಯದಿಂದ ಕೈಬಿಡಲಾಯಿತ್ತು.

ಸೆಂಚೂರಿಯನ್‌ನ ಸೂಪರ್ ಸ್ಪೋರ್ಟ್‌ ಪಾರ್ಕ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು ಭಾರತ 135 ರನ್‌ ಸೋಲು ಕಂಡಿತ್ತು. ಈ ಮೂಲಕ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 2–0ರಲ್ಲಿ ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ.

ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯ ಜ.24ರಿಂದ ಆರಂಭವಾಗಲಿದೆ.

36 ವರ್ಷದ ಎಂ.ಎಸ್‌.ದೋನಿ ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌)ನಲ್ಲಿ ಚೆನ್ನೈ ಸೂಪರ್‌ ಸಿಂಗ್ಸ್‌ ತಂಡದ ಪರ ಕಣಕ್ಕಿಳಿಯಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry