ಚುನಾವಣಾ ಆಯೋಗದ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಣೆ

7

ಚುನಾವಣಾ ಆಯೋಗದ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಣೆ

Published:
Updated:
ಚುನಾವಣಾ ಆಯೋಗದ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಣೆ

ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಮೆರೆಗೆ ಆಮ್‌ ಆದ್ಮಿ ಪಕ್ಷದ 20 ಶಾಸಕರನ್ನು ಚುನಾವಣಾ ಆಯೋಗವು ಅನರ್ಹಗೊಳಿಸಿರುವ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.

ಈ ಪ್ರಕರಣ ಸಂಬಂಧ ಶುಕ್ರವಾರ ಚುನಾವಣಾ ಆಯೋಗದ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ತಡೆ ನೀಡಲು ನಿರಾಕರಿಸಿದೆ.

ಎಎಪಿಯ 20 ಶಾಸಕರನ್ನು ಆಯೋಗವು ಅನರ್ಹಗೊಳಿಸಿ, ಈ ಕ್ರಮವನ್ನು ಅನುಮೋದಿಸಲು ರಾಷ್ಟ್ರಪತಿಗೆ ಪಟ್ಟಿ ಕಳುಹಿಸಿದೆ.

2015ರಲ್ಲಿ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 70 ಕ್ಷೇತ್ರಗಳಲ್ಲಿ 67ರಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿತ್ತು. ಆ ಬಳಿಕ ಗೆದ್ದ ಪ್ರತಿನಿಧಿಗಳ ಮೇಲೆ ಬಿಜೆಪಿ ಆರೋಪಗಳನ್ನು ಮಾಡುತ್ತಲೇ ಬರುತ್ತಿತ್ತು.

ಇವನ್ನೂ ಓದಿ...

‘ಎಎಪಿ’ಯ 20 ಶಾಸಕರನ್ನು ಅನರ್ಹಗೊಳಿಸಿದ ಚುನಾವಣಾ ಆಯೋಗ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry