ಶಿಕ್ಷಕರ ವರ್ಗಾವಣೆ: ಜ.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

7

ಶಿಕ್ಷಕರ ವರ್ಗಾವಣೆ: ಜ.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

Published:
Updated:

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜ.30ರವರೆಗೆ ವಿಸ್ತರಿಸಲಾಗಿದೆ.

ಶಿಕ್ಷಕರ ಮಾಹಿತಿ ತಂತ್ರಾಂಶದಲ್ಲಿ (ಟಿಡಿಎಸ್) ಶಿಕ್ಷಕರ ಮಾಹಿತಿಯ ತಿದ್ದುಪಡಿಗೆ ಕ್ಷೇತ್ರಶಿಕ್ಷಣಾಧಿಕಾರಿಗಳ ಹಂತದಲ್ಲಿ ಅವಕಾಶ ಕಲ್ಪಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶೀಫ್ರದಲ್ಲೇ ಪ್ರಕಟಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

‘ಟಿಡಿಎಸ್‌ನಲ್ಲಿರುವ ಮಾಹಿತಿ ಮತ್ತು ಶಿಕ್ಷಕರ ನೈಜ ಮಾಹಿತಿಗೆ ಹೊಂದಾಣಿಕೆಯಾಗುತ್ತಿಲ್ಲ. ಆನ್‌ಲೈನ್‌ ಅರ್ಜಿಯ ಈ ದೋಷ ಸರಿಪಡಿಸಬೇಕು. ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಬೇಕು’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಶುಕ್ರವಾರ ದೂರು ಸಲ್ಲಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry