ಸಿಬಿಐ ವಿರುದ್ಧ ಅರ್ಜಿ

7

ಸಿಬಿಐ ವಿರುದ್ಧ ಅರ್ಜಿ

Published:
Updated:
ಸಿಬಿಐ ವಿರುದ್ಧ ಅರ್ಜಿ

ಮುಂಬೈ: ಸೊಹ್ರಾಬುದ್ದೀನ್‌ ಶೇಖ್‌ ಎನ್‌ಕೌಂಟರ್‌ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಖುಲಾಸೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರುವ ಸಿಬಿಐ ನಿರ್ಧಾರದ ವಿರುದ್ಧ ಬಾಂಬೆ ವಕೀಲರ ಸಂಘ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಶಾ ಅವರನ್ನು ಆರೋಪಮುಕ್ತಗೊಳಿಸಿ ಸೆಷನ್ಸ್‌ ನ್ಯಾಯಾಲಯವೊಂದು 2014ರ ಡಿಸೆಂಬರ್‌ 30ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರುವುದು ‘ಕಾನೂನುಬಾಹಿರ, ಸ್ವೇಚ್ಛೆ ಮತ್ತು ದುರುದ್ದೇಶಪೂರಿತ ನಿರ್ಧಾರ’ ಎಂದು ವಕೀಲರ ಸಂಘ ಆರೋಪಿಸಿದೆ.

ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿದೆ. ಈ ಅರ್ಜಿ ಸೋಮವಾರ ವಿಚಾರಣೆಗೆ ಬರಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry