ಗೃಹಿಣಿ ಅನುಮಾನಾಸ್ಪದ ಸಾವು

7

ಗೃಹಿಣಿ ಅನುಮಾನಾಸ್ಪದ ಸಾವು

Published:
Updated:

ಬೆಂಗಳೂರು: ಕೆ.ಆರ್.ಪುರ ಸಮೀಪದ ಪ್ರಿಯಾಂಕ ನಗರದಲ್ಲಿ ನೀಲಾ (36) ಎಂಬುವರು ಶುಕ್ರವಾರ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಅವರ ಪತಿ ಧರ್ಮರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಧರ್ಮರಾಜ್‌ ಜತೆ 10 ವರ್ಷಗಳ ಹಿಂದೆ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಗುರುವಾರ ರಾತ್ರಿ ಮಲಗಿದ್ದ ಅವರು, ಬೆಳಗಾಗುವಷ್ಟರಲ್ಲಿ ಅಸುನೀಗಿದ್ದಾರೆ. ಬಾಯಲ್ಲಿ ರಕ್ತ ಬಂದಿರುವುದರಿಂದ ಕೊಲೆ ಶಂಕೆ ವ್ಯಕ್ತವಾಗಿದೆ.

‘ದೇಹದ ಮೇಲೆ ಗಾಯದ ಗುರುತು

ಗಳಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದೇವೆ’ ಎಂದು ಕೆ.ಆರ್.ಪುರ ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry