ಗೋಹತ್ಯೆ ನಿಷೇಧಕ್ಕೆ ರಕ್ತದಲ್ಲಿ ಪತ್ರ ಬರೆದ ಸ್ವಾಮೀಜಿಗಳು

7

ಗೋಹತ್ಯೆ ನಿಷೇಧಕ್ಕೆ ರಕ್ತದಲ್ಲಿ ಪತ್ರ ಬರೆದ ಸ್ವಾಮೀಜಿಗಳು

Published:
Updated:
ಗೋಹತ್ಯೆ ನಿಷೇಧಕ್ಕೆ ರಕ್ತದಲ್ಲಿ ಪತ್ರ ಬರೆದ ಸ್ವಾಮೀಜಿಗಳು

ಮೈಸೂರು: ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಹಾಗೂ ದೇಸಿ ತಳಿಯ ಗೋವುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಐವರು ಸ್ವಾಮೀಜಿಗಳು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ರಕ್ತದಲ್ಲಿ ಪತ್ರ ಬರೆದರು.

ಇಲ್ಲಿನ ಅಗ್ರಹಾರದ ಹೊಸಮಠದಲ್ಲಿ ಭಾರತೀಯ ಗೋ ಪರಿವಾರ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ವಾಮೀಜಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಈ ಪತ್ರ ಬರೆದರು.

ಹೊಸಮಠದ ಚಿದಾನಂದ ಸ್ವಾಮೀಜಿ, ಮೇಲುಕೋಟೆಯ ಇಳೈ ಆಳ್ವಾರ್ ಸ್ವಾಮೀಜಿ, ನೀಲಕಂಠ ಮಠದ ಸಿದ್ದಮಲ್ಲ ಸ್ವಾಮೀಜಿ, ಸವಿತಾ ಸಮಾಜದ ಶ್ರೀಕರ ಬಸವಾನಂದ ಸ್ವಾಮೀಜಿ, ತ್ರಿಪುರ ಭೈರವಿ ಮಠದ ಕೃಷ್ಣ ಮೋಹನಾನಂದ ಗಿರಿ ಗೋಸ್ವಾಮಿ ಪತ್ರ ಬರೆದವರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry