ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಕೆಜಿಎಫ್‌ ತಾಲ್ಲೂಕಿಗೆ ಕೆ.ಸಿ.ರೆಡ್ಡಿ ಹೆಸರು

Last Updated 20 ಜನವರಿ 2018, 10:18 IST
ಅಕ್ಷರ ಗಾತ್ರ

ಕೋಲಾರ: ‘ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೆಜಿಎಫ್‌ ತಾಲ್ಲೂಕಿಗೆ ಕೆ.ಸಿ.ರೆಡ್ಡಿ ತಾಲ್ಲೂಕು ಎಂದು ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚೆ ನಡೆಸುತ್ತೇನೆ’ ಎಂದು ಸಂಸದ ಕೆ.ಎಚ್‌.ಮುನಿಯಪ್ಪ ಭರವಸೆ ನೀಡಿದರು.

ಜಿಲ್ಲಾಡಳಿತವು ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ರೆಡ್ಡಿ ಸಮುದಾಯದವರ ಸಂಖ್ಯೆ ಕಡಿಮೆ ಇದೆ. ಸಮುದಾಯದ ಮಹನೀಯರು ಸಮಾಜಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಇದೇ ಸಮುದಾಯದ ಕೆ.ಸಿ.ರೆಡ್ಡಿ ಅವರು ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿದರು ಎಂದು ಸ್ಮರಿಸಿದರು.

ವಾಲ್ಮೀಕಿ, ತಾತಯ್ಯ, ಬಸವಣ್ಣ ಅವರು ವೇಮನರ ಆಶಯಗಳಿಂದ ಪ್ರಭಾವಿತರಾಗಿ ಸಮಾಜ ಸುಧಾರಣೆಯಲ್ಲಿ ತೊಡಗಿಸಿಕೊಂಡು. ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲೂ ವೇಮನರ ಆಶಯಗಳು ಅಡಗಿವೆ. ಇಂತಹ ಸಾಧಕರ ಕುರಿತು ವಿಚಾರ ಸಂಕಿರಣ ನಡೆಸುವ ಮೂಲಕ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಕರೆ ನೀಡಿದರು.

ಕೆ.ಸಿ.ರೆಡ್ಡಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದನ್ನು ಗಮನಿಸಿದ ಆಲ್ ಇಂಡಿಯಾ ಕಾಂಗ್ರೆಸ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಿತು. ಅವರು ಸಮಾಜದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಹೆಸರು ಶಾಶ್ವತವಾಗಿ ಉಳಿಸಲು ಬಂಗಾರಪೇಟೆ ತಾಲ್ಲೂಕಿನ ಕ್ಯಾಸಂಬಳ್ಳಿಯಲ್ಲಿ 20 ಎಕರೆ ಜಾಗದಲ್ಲಿ ₹ ೨ ಕೋಟಿ ವೆಚ್ಚದಲ್ಲಿ ಸ್ಮಾರಕ ಭವನ ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದ್ದು, ಕಾಮಗಾರಿಗೆ ಸದ್ಯದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದರು.

ರೆಡ್ಡಿ ಸಮುದಾಯದವರು ಮಲ್ಲಮನ ಜಯಂತಿ ಬಗ್ಗೆ ಅನೇಕ ವಿಚಾರಗಳನ್ನು ತಿಳಿಯಬೇಕಿದೆ. ಪದ್ಯಗಳ ಮೂಲಕ ಸಾಮಾಜಿಕ ಕ್ರಾಂತಿ ಸೃಷ್ಟಿಸಿದ ಮಲ್ಲಮ್ಮನ ಚಿಂತನೆಯು ಮೇಲ್ಪಂಕ್ತಿಯಲ್ಲಿದೆ. ಮಾನವ ಮಾನವನಲ್ಲಿ ಬೇಧ ಇರಬಾರದು ಎಂದು ಮಲ್ಲಮ್ಮ ಹೇಳಿದ್ದಾರೆ. ಸಂವಿಧನಾದಲ್ಲೂ ಆ ಆಶಯವೆ ಇದೆ ಎಂದು ತಿಳಿಸಿದರು.

ಆದರ್ಶಪ್ರಾಯರು: ‘ರೆಡ್ಡಿ ಸಮುದಾಯದವರು ಕೃಷಿ ಮಾಡಿ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ. ಸಮುದಾಯದವರು ಸಂಕಷ್ಟದ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಸಹಾಯ ಕೇಳಿದವರಿಗೆ ಇಲ್ಲ ಎಂದಿರುವುದನ್ನು ಕೇಳಿಲ್ಲ. ವೇಮನರ ವಿಚಾರಧಾರೆ ಸಾರ್ವಕಾಲಿಕ. ಪ್ರತಿಯೊಬ್ಬರು ಅವರ ತತ್ವಾದರ್ಶ ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಬೇಕು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಗಾನಂದ ಕೆಂಪರಾಜ್‌ ಆಶಿಸಿದರು.

ಸ್ವಾಗತಾರ್ಹ: ‘ರೆಡ್ಡಿ ಸಮುದಾಯದ ಹಲವರು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಆದರೂ ಅವರು ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿಲ್ಲ’ ಎಂದು ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಬೇಸರ ವ್ಯಕ್ತಪಡಿಸಿದರು.

ಸರ್ಕಾರ ಸಮುದಾಯಕ್ಕೆ ಸೇರಿದ ವೇಮನರ ಜಯಂತಿ ಆಚರಿಸುತ್ತಿರುವುದು ಸ್ವಾಗತಾರ್ಹ. ಸಮುದಾಯದವರು ಸುಶಿಕ್ಷಿತರಾಗಿ ಸಮಾಜದ ಮುಖ್ಯವಾಹಿಗೆ ಬರಬೇಕು. ಜ.೨7ರಂದು ಬಂಗಾರಪೇಟೆಯಲ್ಲಿ ವೇಮನ ಜಯಂತಿ ಆಚರಿಸುತ್ತಿದ್ದು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.

ಸಂಸದ ಮುನಿಯಪ್ಪರ ಪರಿಶ್ರಮದ ಫಲವಾಗಿ ಸರ್ಕಾರ ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣಕ್ಕೆ ಅನುಮೋದನೆ ನೀಡಿದರು. ನೂತನ ಕೆಜಿಎಫ್ ತಾಲ್ಲೂಕಿಗೆ ಜ.27ರಂದು ಚಾಲನೆ ಸಿಗಲಿದ್ದು, ಆ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತಾರೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಭಾಗ್ಯಲಕ್ಷ್ಮಿ, ರೆಡ್ಡಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೇಮನರೆಡ್ಡಿ, ಗೌರವಾಧ್ಯಕ್ಷ ಅಪ್ಪಿರೆಡ್ಡಿ ಭಾಗವಹಿಸಿದ್ದರು.

* * 

ವೇಮನ ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕಷ್ಟೇ ಸೀಮಿತವಾಗದೆ ಇಡೀ ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಸಮಾಜ ಸುಧಾರಣೆಯ ಮಾರ್ಗದರ್ಶನ ನೀಡಿದ್ದಾರೆ. ಅವರ ಪದ್ಯಗಳು ಎರಡೂ ರಾಜ್ಯಗಳಿಗೆ ಬಹಳ ಆಕರ್ಷಣೆಯಾಗಿವೆ
ಕೆ.ಎಚ್‌.ಮುನಿಯಪ್ಪ, ಸಂಸದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT