ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ವಾ ಹಂಚಿ ಕೇಂದ್ರ ಬಜೆಟ್‌ ದಾಖಲೆ ಮುದ್ರಣ ಕಾರ್ಯಕ್ಕೆ ಚಾಲನೆ ನೀಡಿದ ಅರುಣ್‌ ಜೇಟ್ಲಿ

Last Updated 20 ಜನವರಿ 2018, 12:17 IST
ಅಕ್ಷರ ಗಾತ್ರ

ನವದೆಹಲಿ: 2018–19ನೇ ಸಾಲಿನ ಬಜೆಟ್‌ ದಾಖಲೆಗಳ ಮುದ್ರಣ ಕಾರ್ಯಕ್ಕೆ ಸಾಂಪ್ರದಾಯಿಕವಾಗಿ ಸಿಹಿ (ಹಲ್ವಾ) ತಯಾರಿಸಿ ಹಣಕಾಸು ಸಚಿವಾಲಯದ ಸಿಬ್ಬಂದಿಗೆ ಹಂಚುವ ಮೂಲಕ ಶನಿವಾರ ವಿಧ್ಯುಕ್ತ ಚಾಲನೆ ನೀಡಲಾಯಿತು.

ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಹಲ್ವಾ ವಿತರಣೆ ಮೂಲಕ ಈ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ವೇಳೆ ಹಣಕಾಸು ಸಚಿವ ಶಿವ ಪ್ರತಾಪ್ ಶುಕ್ಲಾ ಮತ್ತು ಹಣಕಾಸು ಕಾರ್ಯದರ್ಶಿ ಹಸ್ಮಖ್ ಆಧಿಯಾ ಸೇರಿದಂತೆ ಹಣಕಾಸು ಸಚಿವಾಲಯದ ಅಧಿಕಾರಿಗಳು ಇದ್ದರು.

ದೊಡ್ಡ ಕಡಾಯಿಯಲ್ಲಿ ತಯಾರಿಸಿದ ಹಲ್ವಾವನ್ನು ಬಜೆಟ್‌ ಸಿದ್ಧಪಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳುವ ಹಣಕಾಸು ಸಚಿವಾಲಯದ ಸಿಬ್ಬಂದಿಗೆ ಸಚಿವ ಜೇಟ್ಲಿ ಅವರು ಹಂಚಿದರು.

‘ಹಲ್ವಾ’–ಬಜೆಟ್‌ ನಂಟು!
ಬಜೆಟ್‌ ಮಂಡನೆ ಮಾಡುವುದಕ್ಕೂ ಕೆಲ ದಿನಗಳ ಮೊದಲು ಹಲ್ವಾ ಸಮಾರಂಭದೊಂದಿಗೆ ಬಜೆಟ್‌ ಪ್ರತಿಗಳ ಮುದ್ರಣ ಕಾರ್ಯಾರಂಭವಾಗುತ್ತದೆ. ಮೊದಲಿನಿಂದಲೂ ಈ ಸಂಪ್ರದಾಯ ರೂಢಿಯಲ್ಲಿ ಬಂದಿದೆ.

ಬಜೆಟ್ ಸಿದ್ಧಪಡಿಸುವುದು ಅತ್ಯಂತ ರಹಸ್ಯ ಕಾರ್ಯವಾಗಿದ್ದು, ಇದರಲ್ಲಿನ ಅಂಶಗಳು ಎಲ್ಲಿಯೂ ಸೋರಿಕೆ ಆಗದಿರಲಿ ಎಂದು ಭಾರಿ ಮುನ್ನೆಚ್ಚರಿಕೆ ವಹಿಸಲಾಗುತ್ತದೆ. ತೀವ್ರ ನಿಗಾದಲ್ಲಿ ಈ ಕಾರ್ಯ ನಡೆಯುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT