ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 17 ಮಂದಿ ಸಾವು

6

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 17 ಮಂದಿ ಸಾವು

Published:
Updated:
ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 17 ಮಂದಿ ಸಾವು

ನವದೆಹಲಿ: ನಗರದ ಬವಾನಾ ಕೈಗಾರಿಕಾ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ 17 ಮಂದಿ ಮೃತಪಟ್ಟಿದ್ದಾರೆ.

ಶನಿವಾರ ಸಂಜೆ 6.30ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಮೊದಲ ಮಹಡಿಯಲ್ಲಿ 13 ಮಂದಿ, ಕೆಳ ಮಹಡಿಯಲ್ಲಿ ಮೂವರು ಹಾಗೂ ನೆಲ ಮಹಡಿಯಲ್ಲಿ ಒಬ್ಬರು ಬೆಂಕಿಗೆ ಸಿಲುಕಿ ಮೃತಪಟ್ಟಿರುವುದಾಗಿ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. 

ಮಹಿಳೆಯರು ಸೇರಿ ಅನೇಕ ಕಾರ್ಮಿಕರು ಹೊರಬರಲು ಸಾಧ್ಯವಾಗದೆ ಕಾರ್ಖಾನೆಯ ಕಟ್ಟಡದಲ್ಲಿಯೇ ಸಿಲುಕಿದ್ದಾರೆ. ಪಟಾಕಿ‌ ಕಾರ್ಖಾನೆ, ಪಟಾಕಿ ಸಂಗ್ರಹ ಹಾಗೂ ತೈಲ ಸಂಗ್ರಹ ಮಾಡಿದ್ದ ಜಾಗದಲ್ಲಿ ಬೆಂಕಿ ಆವರಿಸಿದೆ. ಸ್ಥಳದಲ್ಲಿ 20 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿವೆ. 

ಖಾಸಗಿ ಕಾರ್ಖಾನೆಗಳಲ್ಲಿ ಸಂಭವಿಸಿರುವ ಅಗ್ನಿ ಅವಘಡದ ಕುರಿತು ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ.

ಪರಿಹಾರ ಘೋಷಿಸಿದ ಕೇಜ್ರಿವಾಲ್‌

ಅವಘಡದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹1 ಲಕ್ಷ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಘೋಷಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry