ಎರಡನೇ ಸ್ಥಾನಕ್ಕೆ ಕುಸಿದ ಆನಂದ್‌

7

ಎರಡನೇ ಸ್ಥಾನಕ್ಕೆ ಕುಸಿದ ಆನಂದ್‌

Published:
Updated:

ವಿಜ್ಕ್‌ ಆ್ಯನ್‌ ಜೀ, ನೆದರ್ಲೆಂಡ್ಸ್‌: ಐದು ಬಾರಿಯ ವಿಶ್ವ ಚಾಂಪಿಯನ್‌ ವಿಶ್ವನಾಥನ್‌ ಆನಂದ್‌, ಟಾಟಾ ಸ್ಟೀಲ್‌ ಮಾಸ್ಟರ್ಸ್‌ ಚೆಸ್‌ ಟೂರ್ನಿಯ ಆರನೇ ಸುತ್ತಿನಲ್ಲಿ ಡ್ರಾ ಮಾಡಿಕೊಂಡಿದ್ದಾರೆ.

ಶುಕ್ರವಾರ ನಡೆದ ಪೈಪೋಟಿಯಲ್ಲಿ ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಆನಂದ್‌, ನೆದರ್ಲೆಂಡ್ಸ್‌ನ ಅನಿಶ್‌ ಗಿರಿ ವಿರುದ್ಧ ಪಾಯಿಂಟ್‌ ಹಂಚಿಕೊಂಡರು. ಈ ಡ್ರಾದೊಂದಿಗೆ  ಪಾಯಿಂಟ್ಸ್‌ ಪಟ್ಟಿಯಲ್ಲಿ ಜಂಟಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಗೆದ್ದಿದ್ದ ಆನಂದ್‌, ಆ ನಂತರ ಸತತ ಮೂರು ಪಂದ್ಯಗಳಲ್ಲಿ ಡ್ರಾ ಮಾಡಿಕೊಂಡಿದ್ದಾರೆ. ಭಾರತದ ಆಟಗಾರನ ಖಾತೆಯಲ್ಲಿ ನಾಲ್ಕು ಪಾಯಿಂಟ್ಸ್‌ ಇವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry