ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಆರಂಭ

7

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಆರಂಭ

Published:
Updated:

ಬಸವನಬಾಗೇವಾಡಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕಾರ್ಯಕ್ಕೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ಸ್ಥಾಪಿಸಲಾಗಿರುವ ಖರೀದಿ ಕೇಂದ್ರದಲ್ಲಿ ಕಾಂಗ್ರೆಸ್‌ ಬ್ಲಾಕ್‌ ಘಟಕದ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ,‘ತೊಗರಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿದ ಸಂದರ್ಭದಲ್ಲಿ ಖರೀದಿಸಲು ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಈಗಾಗಲೇ ನೋಂದಣಿ ಮಾಡಿಸಿದ ರೈತರು ತೊಗರಿ ಮಾರಾಟ ಮಾಡುವ ಮೂಲಕ ಬೆಂಬಲ ಬೆಲೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಬಾಲಚಂದ್ರ ಮುಂಜಾನೆ, ಎಪಿಎಂಸಿ ನಿರ್ದೇಶಕ ಶೇಖರ ಗೊಳಸಂಗಿ, ತಹಶೀಲ್ದಾರ್ ಎಂ.ಎನ್.ಚೋರಗಸ್ತಿ, ಗ್ರೇಡ್–2 ತಹಶೀಲ್ದಾರ್ ಪಿ.ಜೆ.ಪವಾರ, ದಯಾನಂದ ಜಾಲಗೇರಿ, ನಜೀರ್ ಗಣಿ, ನಿಸಾರ ಚೌಧರಿ, ಸಂಗಮೇಶ ಓಲೇಕಾರ, ವೈ.ಡಿ,ನಾಯ್ಕೋಡಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry