ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಕಾರ್ಮಿಕರು ಬಲಿ

7

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಕಾರ್ಮಿಕರು ಬಲಿ

Published:
Updated:
ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಕಾರ್ಮಿಕರು ಬಲಿ

ವಡೋದರಾ: ಇಲ್ಲಿನ ನಂದೆಸಾರಿ ಕೈಗಾರಿಕ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.

12 ಮಂದಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಾಲ್ಕು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಒಟ್ಟು 16 ಜನರನ್ನು ಇದುವರೆಗೂ ರಕ್ಷಿಸಲಾಗಿದೆ. 19 ಮಂದಿ ಕಾಣೆಯಾಗಿದ್ದಾರೆ ಮೃತಪಟ್ಟ ಮೂವರ ಕಾರ್ಮಿಕರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆ ನಸುಕಿನಲ್ಲಿ ನಡೆದಿದ್ದು, ಪ್ರಾರಂಭದಲ್ಲಿ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಎಲ್ಲೆಡೆ ಹಬ್ಬಿ ಈ ಅನಾಹುತ ಸಂಭವಿಸಿದೆ. ಅಗ್ನಿಶಾಮಕ ದಳ ನಡೆಸಿದ ಸುಮಾರು ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಅಗ್ನಿಶಾಮಕ ದಳ ಅಧಿಕಾರಿ ಓಂ ಜಡೇಜಾ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry