ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನಕ್ಕೆ ಗಡುವು

7

ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನಕ್ಕೆ ಗಡುವು

Published:
Updated:

ಲಾಹೋರ್‌: ಏಳು ವರ್ಷದ ಬಾಲಕಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಮುಖ ಆರೋಪಿಯನ್ನು 72 ಗಂಟೆ ಒಳಗೆ ಬಂಧಿಸುವಂತೆ ಪಂಜಾಬ್ ಪೊಲೀಸ್‌ ಮುಖ್ಯಸ್ಥರಿಗೆ ಸುಪ್ರೀಂಕೋರ್ಟ್‌ ಗಡುವು ನೀಡಿದೆ.

ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಶವ ಕಸದ ತೊಟ್ಟಿಯಲ್ಲಿ ಇದೇ ಜನವರಿ 9ರಂದು ಕಸೂರು ನಗರದಲ್ಲಿ ಪತ್ತೆಯಾಗಿತ್ತು. ಬಾಲಕಿಯ ಅತ್ಯಾಚಾರಕ್ಕೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ 800 ಶಂಕಿತರ ಡಿಎನ್‌ಎ ಪರೀಕ್ಷೆ ನಡೆಸಲಾಗಿದೆ. ಆದರೆ, ಆರೋಪಿಗಳು ಪತ್ತೆಯಾಗಿಲ್ಲ.

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ  ಮಿಯಾಣ್‌ ಸಾಕ್ವಿಬ್ ನಿಸಾರ್‌ ಅವರು ಪ್ರಮುಖ ಆರೋಪಿ ಬಂಧಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಸೂರಿನಲ್ಲಿ 2015ರಿಂದ ಇಲ್ಲಿಯವರೆಗೆ ಎಂಟು ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ ನಡೆದಿದೆ. ಈ ಬಾಲಕಿಯರ ಪೋಷಕರು ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯ ಒದಗಿಸುವಂತೆ ಮುಖ್ಯ ನ್ಯಾಯಮೂರ್ತಿ ಅವರಲ್ಲಿ ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry