ಪೊಲೀಸರ ವಿರುದ್ಧವೇ ಎಫ್ಐಆರ್‌

7

ಪೊಲೀಸರ ವಿರುದ್ಧವೇ ಎಫ್ಐಆರ್‌

Published:
Updated:

ಸಹರಾನ್‌ಪುರ(ಉತ್ತರಪ್ರದೇಶ): ರಕ್ತದ ಕಲೆಯಾಗುತ್ತದೆಂದು ಅಪಘಾತದಲ್ಲಿ ಗಾಯಗೊಂಡವರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯಲು ನಿರಾಕರಿಸಿದ್ದಕ್ಕೆ ಮೂವರು ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡ ಇಬ್ಬರು ಯುವಕರನ್ನು ಆಸ್ಪತ್ರೆಗೆ ಕರೆದೊಯ್ಯಲು ಈ ಮೂವರು ಪೊಲೀಸರು ನಿರಾಕರಿಸಿದ್ದರು. ಇದರಿಂದಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ತಡವಾಗಿತ್ತು. ನಂತರ ಆ ಇಬ್ಬರೂ ಯುವಕರು ಮೃತಪಟ್ಟಿದ್ದರು. ‘ಮೂವರು ಪೊಲೀ

ಸರ ವಿರುದ್ಧ ಐಪಿಸಿ ಸೆಕ್ಷನ್ 304ಎ ಅಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಸಹರಾನ್‌ಪುರ ಎಸ್‌ಪಿ ಪ್ರಬಲ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry