ಹಲ್ಲೆ ಮಾಡಿದವರ ಮೇಲೆ ಗುಂಡು ಹಾರಿಸಿ: ಗೃಹ ಸಚಿವ

7

ಹಲ್ಲೆ ಮಾಡಿದವರ ಮೇಲೆ ಗುಂಡು ಹಾರಿಸಿ: ಗೃಹ ಸಚಿವ

Published:
Updated:
ಹಲ್ಲೆ ಮಾಡಿದವರ ಮೇಲೆ ಗುಂಡು ಹಾರಿಸಿ: ಗೃಹ ಸಚಿವ

ರಾಮದುರ್ಗ (ಬೆಳಗಾವಿ ಜಿಲ್ಲೆ): ‘ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಪೊಲೀಸರ ಮೇಲೆ ಯಾರೇ ಹಲ್ಲೆ ಮಾಡಿದರೂ ಪ್ರತಿಯಾಗಿ ಗುಂಡು ಹಾರಿಸಬೇಕು’ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಭಾನುವಾರ ಇಲ್ಲಿ ಸೂಚನೆ ನೀಡಿದರು.

ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಲ್ಲಿ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಸರ್ಕಾರವು ಪೊಲೀಸರಿಗೆ ಆತ್ಮರಕ್ಷಣೆಗಾಗಿ ಬಂದೂಕು ನೀಡಿದೆ. ಹಲ್ಲೆ ನಡೆದ ಸಂದರ್ಭದಲ್ಲಿ ಅದನ್ನು ಬಳಸಬೇಕು. ಈ ಕುರಿತು ಹಿರಿಯ ಅಧಿಕಾರಿಗಳು ಮಾರ್ಗದರ್ಶನ ಮಾಡಿದ್ದಾರೆ’ ಎಂದರು.

‘ಈ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅನಾಹುತ ಸೃಷ್ಟಿಸಿಕೊಳ್ಳಬಾರದು. ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಜತೆಗೆ ಆತ್ಮರಕ್ಷಣೆಗೂ ಮಹತ್ವ ನೀಡಬೇಕು’ ಎಂದು ಅವರು ಸಲಹೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry