ಹೆಗಡೆ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

7

ಹೆಗಡೆ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

Published:
Updated:
ಹೆಗಡೆ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ಪ್ರತಿಭಟನೆ ನಡೆಯಿತು.

‘ಹೆಗಡೆ ಅವರನ್ನು ಸಂಪುಟದಿಂದ ಪ್ರಧಾನಿ ನರೇಂದ್ರ ಮೋದಿ ತಕ್ಷಣ ಕೈಬಿಡಬೇಕು. ಅಷ್ಟೇ ಅಲ್ಲ, ಅವರನ್ನು ದೇಶದಿಂದಲೇ ಗಡೀಪಾರು ಮಾಡಬೇಕು’ ಎಂದೂ ಪ್ರತಿಭಟನೆಕಾರರು ಒತ್ತಾಯಿಸಿದರು.

‘ರಾಷ್ಟ್ರಪಿತ ಮಹಾತ್ಮ ಗಾಂಧಿ ಬಗ್ಗೆ ಬಿಜೆಪಿಯವರಿಗೆ ಒಲವು ಇಲ್ಲ. ಅಂಬೇಡ್ಕರ್ ರಚಿಸಿದ ಸಂವಿಧಾನ ಬಗ್ಗೆಯೂ ನಂಬಿಕೆ ಇಲ್ಲ. ಕೋಮುವಾದಿ ಮತ್ತು ಜಾತಿವಾದದ ಮೇಲಷ್ಟೆ ಅವರಿಗೆ ನಂಬಿಕೆ. ಅಶಾಂತಿ ಮೂಡಿಸಿ ರಾಜಕೀಯ ಲಾಭ ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಮುಖಂಡ ಎಸ್. ಮನೋಹರ್ ಆಕ್ರೋಶ ವ್ಯಕ್ತಪಡಿಸಿದರು.

‘ಆಚಾರ, ವಿಚಾರ, ಸಂಪ್ರದಾಯದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರ ನಾಲಿಗೆಗಳಲ್ಲಿ ಹರಿದಾಡುವ ಶಬ್ಧಗಳು ಅವರ ಘನತೆಗೆ ತಕ್ಕದಲ್ಲ. ಜನರನ್ನು ದಾರಿ ತಪ್ಪಿಸಬಹುದೆಂದು ಅವರು ಭಾವಿಸಿದ್ದಾರೆ. ಆದರೆ, ರಾಜ್ಯದ ಪ್ರಜ್ಞಾವಂತ ಜನರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

ಬೆಂಗಳೂರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜನಾರ್ದನ, ವಕ್ತಾರರಾದ ಸಲೀಂ, ಮುಖಂಡರಾದ ರಾಮಕೃಷ್ಣ, ಶೇಖರ್, ಮಹಿಳಾ ಕಾಂಗ್ರೆಸ್‌ನ ಆಶಾ ರಾಜು, ಯುವ ಕಾಂಗ್ರೆಸ್‌ನ ಶಂಕರ್ ಜಿ.ಗೌಡ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry