ಆರೋಗ್ಯ ಚೇತನಾ ಕಾರ್ಯಕ್ರಮಕ್ಕೆ ಚಾಲನೆ

7

ಆರೋಗ್ಯ ಚೇತನಾ ಕಾರ್ಯಕ್ರಮಕ್ಕೆ ಚಾಲನೆ

Published:
Updated:

ಬೆಂಗಳೂರು: ಅದಮ್ಯ ಚೇತನಾ ಪ್ರತಿಷ್ಠಾನ ವತಿಯಿಂದ ಗಿರಿನಗರದಲ್ಲಿ ಭಾನುವಾರ ಆಯೋಜಿಸಿದ್ದ ಆರೋಗ್ಯ ಚೇತನ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಅನಂತ ಕುಮಾರ್‌ ಚಾಲನೆ ನೀಡಿದರು. 

‘ಮಹಿಳೆಯರು ಕುಟುಂಬದ ಎಲ್ಲ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಮಾಡುತ್ತಾರೆ. ಆದರೆ, ಅವರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡುತ್ತಾರೆ. ಹೀಗಾಗಿ, ಇಂತಹ ಉಚಿತ ಶಿಬಿರಗಳು ನಡೆಯಬೇಕು’ ಎಂದು ಸಚಿವರು ಅಭಿಪ್ರಾಯಪಟ್ಟರು.  

ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಬೆಂಗಳೂರು ಭಾಗದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. 300ಕ್ಕೂ ಹೆಚ್ಚು ಮಹಿಳೆಯರು ಶಿಬಿರದ ಪ್ರಯೋಜನ ಪಡೆದುಕೊಂಡರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry