‘ಸದಾಶಿವ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ’

7

‘ಸದಾಶಿವ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ’

Published:
Updated:

ಬೆಂಗಳೂರು: ಒಳಮೀಸಲಾತಿ ಕುರಿತು ಎ.ಜೆ.ಸದಾಶಿವ ಆಯೋಗ ನೀಡಿರುವ ವರದಿಯನ್ನು ಜಾರಿಗೊಳಿಸಲು ಸರ್ಕಾರವು ಮೀನಮೇಷ ಎಣಿಸುತ್ತಿದೆ. ಈ ವರದಿ ಜಾರಿಗೆ ಒತ್ತಾಯಿಸಿ ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಮಾದಿಗ ಸಂಘಟನೆಗಳ ಒಕ್ಕೂಟ ಸದಸ್ಯ ಪ್ರಶಾಂತ್ ಚಕ್ರವರ್ತಿ ತಿಳಿಸಿದರು.

ಒಕ್ಕೂಟ ವತಿಯಿಂದ ಕೆ.ಆರ್.ಪುರ ಸಮೀಪದ ಆವಲಹಳ್ಳಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಬೆಂಗಳೂರು ಪೂರ್ವ ತಾಲ್ಲೂಕು ಮಾದಿಗರ ಸಮಾವೇಶದ ಪೂರ್ವಸಿದ್ಧತಾ ಸಭೆ’ಯಲ್ಲಿ ಅವರು ಮಾತನಾಡಿದರು.

ಸದಾಶಿವ ವರದಿ ಪ್ರಕಾರ, ಮಾದಿಗ ಸಮುದಾಯಕ್ಕೆ ಶೇ 6ರಷ್ಟು, ದಲಿತರಿಗೆ ಶೇ 5, ಭೋವಿ, ಕೊರಮ, ಕೊರಚ ಮತ್ತು ಲಂಬಾಣಿ ಜಾತಿಗಳಿಗೆ ಶೇ 3, ಅಲೆಮಾರಿ ಸಮುದಾಯಕ್ಕೆ ಶೇ 1ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಲಾಗಿದೆ. ಈ ವರದಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಒಕ್ಕೂಟದ ಸದಸ್ಯ ವೇಣು ಮಾದರ, ‘ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ 1 ಲಕ್ಷಕ್ಕಿಂತ ಹೆಚ್ಚಿನ ಮಂದಿ ಇದ್ದಾರೆ. ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಬಲಗೊಳ್ಳಲು ಸದಾಶಿವ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry