ಅಂಗವಿಕಲರಿಗೆ ಶೇ 3ರಷ್ಟು ಬಡ್ತಿ ಮೀಸಲಾತಿ: ಸಚಿವ ಭರವಸೆ

7

ಅಂಗವಿಕಲರಿಗೆ ಶೇ 3ರಷ್ಟು ಬಡ್ತಿ ಮೀಸಲಾತಿ: ಸಚಿವ ಭರವಸೆ

Published:
Updated:

ಬೆಂಗಳೂರು: ‘ಸರ್ಕಾರಿ ನೌಕರಿಯಲ್ಲಿರುವ ಅಂಗವಿಕಲರಿಗೆ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಶೇ 3 ರಷ್ಟು ಬಡ್ತಿ ಮೀಸಲಾತಿ ನೀಡಬೇಕಿದೆ. ಈ ಸಂಬಂಧ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಗೆ ನಿಯೋಗವನ್ನು ಕರೆದೊಯ್ಯುತ್ತೇನೆ’ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಹಾಗೂ ಅರೆ ಸರ್ಕಾರಿ ಅಂಗವಿಕಲ ನೌಕರರ ಸಂಘವು ಇಲ್ಲಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಅವರು ಮಾತನಾಡಿದರು.

‘ಅಂಗವಿಕಲರಿಗೆ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಬಸ್‌ ಪಾಸ್‌ ಬಳಸಿ ರಾಜ್ಯಾದಾದ್ಯಂತ ಸಂಚಾರಿಸಲು ಅವಕಾಶ ಮಾಡಿಕೊಡಬೇಕು. ಈ ಬಗ್ಗೆಯೂ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ’ ಎಂದರು.

ಸಂಘದ ಅಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಿಗಿ, ‘ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಸರ್ಕಾರ ಸ್ಪಂದಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್‌.ಕಾಂತರಾಜು, ‘ಅಂಗವಿಕಲರು ಎಲ್ಲ ಕ್ಷೇತ್ರದಲ್ಲಿ ಉತ್ತಮ ಸಾಧನೆಗಳನ್ನು ಮಾಡುತ್ತಿದ್ದಾರೆ. ಎಲ್ಲರಂತೆ ಅವರೂ ಜೀವನ ನಡೆಸುತ್ತಿದ್ದಾರೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry