ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ

7

ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ

Published:
Updated:
ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ

ಬೆಂಗಳೂರು: ಕರ್ನಾಟಕ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘವು ಚಾಮರಾಜಪೇಟೆಯ ವಿಠಲನಗರದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಶೇ 24.1ರಷ್ಟು ಇದ್ದಾರೆ. ಈ ಸಂಖ್ಯೆಗೆ ಅನುಗುಣವಾಗಿ ಅನುದಾನ ಹಂಚಿಕೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ನಾಯಕ ಜನಾಂಗವು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಈ ಪಂಗಡದ 15 ಮಂದಿ ಶಾಸಕರಾಗುವ ಅವಕಾಶವಿದೆ. ಕಾಂಗ್ರೆಸ್‌ ಪಕ್ಷದಿಂದಲೇ 11 ಮಂದಿ ಗೆಲುವು ಸಾಧಿಸಿದ್ದಾರೆ ಎಂದರು.

ವಾಲ್ಮೀಕಿ ಭವನದಲ್ಲಿ ಇನ್ನೂ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಬೇಕಿದೆ. ಇದಕ್ಕಾಗಿ ₹1 ಕೋಟಿ ಅನುದಾನ ನೀಡಬೇಕು. ಜನಾಂಗದ ಶೈಕ್ಷಣಿಕ ಪ್ರಗತಿಗೆ ಶಾಲಾ–ಕಾಲೇಜು ಸ್ಥಾಪಿಸಲು 5 ಎಕರೆ ಜಮೀನು ಮಂಜೂರು ಮಾಡಿ, ಆರ್ಥಿಕ ನೆರವನ್ನೂ ಒದಗಿಸಬೇಕು ಎಂದು ಸಂಘದ ಅಧ್ಯಕ್ಷ ಪ್ರಭುಸ್ವಾಮಿ ಮನವಿ ಮಾಡಿದರು.

‘ಭವನ ನಿರ್ಮಾಣಕ್ಕೆ ಅನುದಾನ ಒದಗಿಸುತ್ತೇನೆ’ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಕಟ್ಟಡ ನಿರ್ಮಾಣಕ್ಕಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ₹50 ಲಕ್ಷ ನೀಡಿದ್ದು, ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರು ಶಾಸಕರ ನಿಧಿಯಿಂದ ₹10 ಲಕ್ಷ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry