ತುಮಕೂರಿನಲ್ಲಿ ‘ಪ್ರಜಾವಾಣಿ ಕ್ವಿಜ್’ ಆರಂಭ

7

ತುಮಕೂರಿನಲ್ಲಿ ‘ಪ್ರಜಾವಾಣಿ ಕ್ವಿಜ್’ ಆರಂಭ

Published:
Updated:
ತುಮಕೂರಿನಲ್ಲಿ ‘ಪ್ರಜಾವಾಣಿ ಕ್ವಿಜ್’ ಆರಂಭ

ತುಮಕೂರು: ನಗರದ ಎಸ್ಐಟಿ ಬಿರ್ಲಾ ಸಭಾಂಗಣದಲ್ಲಿ ಹಮ್ಮಿಕೊಂಡ ‘ಪ್ರಜಾವಾಣಿ ಕ್ವಿಜ್ ಚಾಂಪಿಯನ್‌ಷಿಪ್‌ ಸೋಮವಾರ ಬೆಳಿಗ್ಗೆ ಪ್ರಾರಂಭವಾಯಿತು.

ಮೂವರು ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿದರು. ಮೊದಲ ಹಂತದ 20 ಪ್ರಶ್ನೆಗಳಿಗೆ ಉತ್ತರಿಸುವ ಆಯ್ಕೆ ಸ್ಪರ್ಧೆ ಆರಂಭವಾಗಿದ್ದು, ವಿದ್ಯಾರ್ಥಿಗಳು ಕುತೂಹಲದಿಂದ ಉತ್ತರ ಬರೆಯುತ್ತಿದ್ದಾರೆ. ಇಡೀ ಸಭಾಂಗಣ ವಿದ್ಯಾರ್ಥಿಗಳಿಂದ ತುಂಬಿದೆ. ವಿದ್ಯಾರ್ಥಿಗಳೊಂದಿಗೆ ಅವರ ಪೋಷಕರು, ಶಿಕ್ಷಕರೂ  ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.

ಪೋಷಕರಿಗೆ ಮತ್ತು ಶಿಕ್ಷಕರಿಗೆ ಗ್ಯಾಲರಿಯಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದನ್ನು ಸಭಾಂಗಣದಲ್ಲಿ ನಿಷೇಧಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry