ಫೆಬ್ರುವರಿಗೆ ತಾಲ್ಲೂಕು ಸಾಹಿತ್ಯ ಸಮ್ಮೇಳನ

7

ಫೆಬ್ರುವರಿಗೆ ತಾಲ್ಲೂಕು ಸಾಹಿತ್ಯ ಸಮ್ಮೇಳನ

Published:
Updated:

ನಾಗಮಂಗಲ: ತಾಲ್ಲೂಕು ಮಟ್ಟದ 5ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆಬ್ರುವರಿ ತಿಂಗಳಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್. ಚಲುವರಾಯಸ್ವಾಮಿ ಹೇಳಿದರು.

ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕೆ ವ.ನಂ.ಶಿವರಾಮು, ಹಾಲತಿ ಸೋಮಶೇಖರ್, ಯತ್ತಗೋನಹಳ್ಳಿ ನಾಗರಾಜು, ಜವರನಹಳ್ಳಿ ಸಿದ್ದಪ್ಪ, ಅಂಕಣಕಾರ ಬಿ.ಚಂದ್ರೇಗೌಡ, ಆಯತನಹಳ್ಳಿಯ ಎ.ಆರ್.ಮಣಿಕಾಂತ್ ಹೆಸರು ಚರ್ಚೆಗೆ ಬಂದಿದ್ದು ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್‌ ಮಾಡಲಿದೆ ಎಂದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಖರಡ್ಯ ಬಸವೇಗೌಡ, ಕಾರ್ಯದರ್ಶಿ ಟಿ.ವಿ.ಕೌಶಿಕ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಮತ್ತು ಪರಮೇಶ್, ಗೌರವ ಅಧ್ಯಕ್ಷ ರಾದ ಕೊಣನೂರು ಹನುಮಂತು. ಎನ್.ಜೆ ರಾಜೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry