ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಪದ್ಮಾವತ್‌’ ಚಿತ್ರ ಬಿಡುಗಡೆ ವಿರೋಧಿಸಿ ರಾಜಸ್ಥಾನ, ಮಧ್ಯ ಪ್ರದೇಶದಿಂದ ಸುಪ್ರೀಂ ಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ: ಜ.23ಕ್ಕೆ ವಿಚಾರಣೆ

Last Updated 22 ಜನವರಿ 2018, 9:03 IST
ಅಕ್ಷರ ಗಾತ್ರ

ನವದೆಹಲಿ: ‘ಪದ್ಮಾವತ್‌’ ಚಿತ್ರ ಬಿಡುಗಡೆಗೆ ಹೇರಿದ್ದ ನಿರ್ಬಂಧಕ್ಕೆ ಸುಪ್ರೀಂ ಕೋರ್ಟ್‌ ನೀಡಿರುವ ತಡೆಯಾಜ್ಞೆ ಆದೇಶ ಪುನರ್‌ ಪರಿಶೀಲನೆ ನಡೆಸುವಂತೆ ರಾಜಸ್ಥಾನ ಮತ್ತು ಮಧ್ಯ ಪ್ರದೇಶ ರಾಜ್ಯಗಳು ಸೋಮವಾರ ಅರ್ಜಿ ಸಲ್ಲಿಸಿವೆ.

ಜ.25ರಂದು ದೇಶದಾದ್ಯಂತ ಪದ್ಮಾವತ್‌ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿತ್ತು. ಈ ಸಂಬಂಧ ರಾಜಸ್ಥಾನ ಮತ್ತು ಮಧ್ಯ ಪ್ರದೇಶ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ಮಂಗಳವಾರ ಅರ್ಜಿ ವಿಚಾರಣೆ ನಡೆಸಲು ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ ಸಮ್ಮತಿಸಿದೆ. 

‘ಪದ್ಮಾವತ್‌’ ಚಿತ್ರ ಬಿಡುಗಡೆಗೆ ವಿರೋಧಿಸುತ್ತಿರುವ ರಜಪೂತ ಸಮುದಾಯದ ಮಹಿಳೆಯರ ತಂಡವೊಂದು ದಯಾಮರಣಕ್ಕೆ ಅವಕಾಶ ನೀಡುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆಯಲು ನಿರ್ಧರಿಸಿ ಭಾನುವಾರ ಬೃಹತ್‌ ಪ್ರತಿಭಟನಾ ರ‍್ಯಾಲಿ ನಡೆಸಿದ್ದರು.

ಅಧಿಕೃತವಾಗಿ ಜ.25ಕ್ಕೆ ಚಿತ್ರ ಬಿಡುಗಡೆಯಾಗಲಿದ್ದು ಚಿತ್ರ ನಿರ್ಮಾಣ ಸಂಸ್ಥೆ ‘ವಯೊಕಾಮ್‌ 18’ ಹಲವು ರಾಜ್ಯಗಳಲ್ಲಿ ಜ.24ರ ಸಂಜೆಯಿಂದಲೇ ವಿಶೇಷ ಪ್ರದರ್ಶನ ನಿಗದಿ ಪಡಿಸಿದೆ. ಸಂಜೆ 6ರಿಂದ 10ರ ವರೆಗೂ ಪ್ರದರ್ಶನಗಳಿಗೆ ಈಗಾಗಲೇ ಬುಕ್ಕಿಂಗ್‌ ಪ್ರಾರಂಭಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT