ಭಾಷಣ: ಶ್ರೇಯಸ್ ಕೊಟ್ಯಾನ್‌ ಪ್ರಥಮ

7

ಭಾಷಣ: ಶ್ರೇಯಸ್ ಕೊಟ್ಯಾನ್‌ ಪ್ರಥಮ

Published:
Updated:
ಭಾಷಣ: ಶ್ರೇಯಸ್ ಕೊಟ್ಯಾನ್‌ ಪ್ರಥಮ

ಉಡುಪಿ: ಗಣರಾಜ್ಯೋತ್ಸವದ ಅಂಗವಾಗಿ ನೆಹರೂ ಯುವ ಕೇಂದ್ರ ಆಯೋಜಿಸಿದ್ದ ‘ದೇಶ ಭಕ್ತಿ ಮತ್ತು ರಾಷ್ಟ್ರನಿರ್ಮಾಣದಲ್ಲಿ ಯುವ

ಜನರು’ ಕುರಿತ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿ ಶ್ರೇಯಸ್ ಕೋಟ್ಯಾನ್ ಪ್ರಥಮ ಬಹುಮಾನ ಗಳಿಸಿದ್ದಾರೆ.

ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ವಿಜೇತರಾಗಿದ್ದ ಅವರು ನವದೆಹಲಿಯಲ್ಲಿ 21ರಂದು ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಬಹುಮಾನ ₹2 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ವಿದ್ಯಾರ್ಥಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು, ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯಲ್ಲಿಯೂ ಶ್ರೇಯಸ್ ಸಕ್ರಿಯರಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry