ನಿಧನ: ಮಾಜಿ ಶಾಸಕ ಪ್ರಹ್ಲಾದ ರೇಮಾಣಿ

7

ನಿಧನ: ಮಾಜಿ ಶಾಸಕ ಪ್ರಹ್ಲಾದ ರೇಮಾಣಿ

Published:
Updated:
ನಿಧನ: ಮಾಜಿ ಶಾಸಕ ಪ್ರಹ್ಲಾದ ರೇಮಾಣಿ

ಖಾನಾಪುರ (ಬೆಳಗಾವಿ ಜಿಲ್ಲೆ): ಬಿಜೆಪಿ ಮುಖಂಡ, ಮಾಜಿ ಶಾಸಕ ಪ್ರಹ್ಲಾದ ಕಲ್ಲಪ್ಪ ರೇಮಾಣಿ (67) ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.

ಅವರಿಗೆ ಪತ್ನಿ, ಮೂವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಖಾನಾಪುರ ತಾಲ್ಲೂಕಿನ ನಾವಗಾ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಅರಣ್ಯ ಗುತ್ತಿಗೆದಾರರಾಗಿದ್ದ ಅವರು ಮೂರು ದಶಕಗಳಿಂದ ತಾಲ್ಲೂಕಿನಲ್ಲಿ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದರು. ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1994, 1999 ಮತ್ತು 2004ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 2008ರ ಚುನಾವಣೆಯಲ್ಲಿ ಜಯಗಳಿಸಿ, ತಾಲ್ಲೂಕಿನ ರಾಷ್ಟ್ರೀಯ ಪಕ್ಷದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದರು.

2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಮುಂಬರುವ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry